

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯ ಸರ್ಕಾರದ ಆತ್ಮ ಯೋಜನೆಯಡಿ ವಿಶಿಷ್ಟ ಸಾಧನೆ ಮೂಲಕ ರೈತ ಸಮುದಾಯಕ್ಕೆ ಅತ್ಯುತ್ತಮ ಕೊಡುಗೆ ನೀಡುತ್ತಿರುವ ರೈತರಿಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ (ಹಸಿರುಮನೆ, ಕಸಿ ಅಭಿವೃದ್ಧಿ, ಸಸ್ಯಕಾಶಿ ಇತ್ಯಾದಿ), ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ವಿಭಾಗಗಳಲ್ಲಿ ಅನ್ವೇಷಣೆ, ಸಾಧನೆ ಮಾಡಿರಬೇಕು. ಆಸಕ್ತರು ಜಂಟಿ ಕೃಷಿ ನಿರ್ದೇಶಕರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು ಆ. 30ರೊಳಗೆ ಸಲ್ಲಿಸಬೇಕು. ಮಾಹಿತಿಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಹಾಗೂ ಆತ್ಮ ಯೋಜನಾ ನಿರ್ದೇಶಕ ಮಂಜುನಾಥ ಅಂತರವಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.