

ವಿಜಯವಾಣಿ ಸುದ್ದಿಜಾಲ ಧಾರವಾಡ
ಮೀನುಗಾರಿಕೆ ಇಲಾಖೆಯಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಮೀನು ಕೃಷಿ ಕೊಳ, ಮೀನು ಮರಿ ಪಾಲನಾ ಕೋಳ ನಿರ್ಮಿಸಲು ಸಹಾಯಧನ ಪಡೆಯಲು ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು ಮೇ 31ರೊಳಗೆ ಸಲ್ಲಿಸಬೇಕು. ಮಾಹಿತಿಗೆ ಆಯಾ ತಾಲೂಕು ಮೀನುಗಾರಿಕೆ ಇಲಾಖೆ ಕಚೇರಿ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.