ವಿಕಲಚೇತನರಿಂದ ಅರ್ಜಿ ಆಹ್ವಾನ

Published on

ಮಂಗಳೂರು: ವಿಕಲಚೇತನರಿಗೆ ವಿಕಲಚೇತನರ ಮೂಲಕವೇ ಅವರು ವಾಸಿಸುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಪುನರ್ವಸತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡುವ ಸಲುವಾಗಿ ವಿಟ್ಲ ಪಟ್ಟಣ ಪಂಚಾಯತ್, ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಗರ ಪುನರ್ವಸತಿ ಕಾರ್ಯಕರ್ತರು ಸ್ಥಳೀಯರಾಗಿರಬೇಕು. ವಯೋಮಿತಿ 18-45 ವರ್ಷದ ಆರೋಗ್ಯವಂತರಾಗಿರಬೇಕು. ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಪಾಸ್/ಫೇಲ್ ಆದವರು ಅರ್ಜಿ ಸಲ್ಲಿಸಬಹುದು. ಅಂಗವಿಕಲರಾಗಿರಬೇಕು, ಭಾಗಶಃ ಅಂಧರಿಗೆ/ ಭಾಗಶಃ ಶ್ರವಣದೋಷವುಳ್ಳವರಿಗೆ (ಮೈಲ್ಡ್ ಮತ್ತು ಮಾಡರೇಟ್) ಮತ್ತು ದೈಹಿಕ ಅಂಗವಿಕಲರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಅಂಗವಿಕಲತೆಯು ಶೇ. 40 ರಷ್ಟಿರಬೇಕು. ಅಂಗವಿಕಲತೆಯ ಬಗ್ಗೆ ವೈದ್ಯಕೀಯ ಮಂಡಳಿಯ ಪ್ರಮಾಣ ಪತ್ರ/ ಗುರುತಿನ ಚೀಟಿಯ ದಾಖಲೆ ಒದಗಿಸಬೇಕು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಕಛೇರಿ, ವಿಟ್ಲ ಕುಲಾಲ ರಜತ ಭವನ ಕಟ್ಟಡ, ಸಮುದಾಯ ಆರೋಗ್ಯ ಕೇಂದ್ರದ ಬಳಿ ವಿಟ್ಲ ಕಚೇರಿಗೆ ನೀಡಬೇಕು. ಅರ್ಜಿ ನಮೂನೆಗಳಿಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಛೇರಿ ಸಂಪರ್ಕಿಸಬಹುದು ಎಂದು ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net