

ನಂಜನಗೂಡು : ಗ್ರಾಮೀಣ ವಿದ್ಯಾರ್ಥಿಗಳಿಗೆ ತಾಂತ್ರಿಕ ತರಬೇತಿ ನೀಡಲು ನಂಜನಗೂಡಿನ ಜೆಎಸ್ ಎಸ್ ಪಾಲಿಟೆಕ್ನಿಕ್ ಆಹ್ವಾನಿಸಿದೆ. ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಹರು. ಮೆರಿಟ್ ಆಧಾರದ ಮೇಲೆ ಅನುದಾನಿತ ಕೋರ್ಸುಗಳಾದ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು ಸಿವಿಲ್ ಇಂಜಿನಿಯರಿಂಗ್ ಕೋರ್ಸುಗಳಿಗೆ ಪ್ರವೇಶಾವಕಾಶವಿದೆ. ಅನುದಾನ ರಹಿತ ಕೋರ್ಸ್‌ಗಳಾದ ಕಂಪ್ಯೂಟರ್ ಸೈಸ್, ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್‌ಗಳಿಗೂ ನೇರ ಪ್ರವೇಶಕ್ಕೆ ಅವಕಾಶವಿದೆ.
ಅರ್ಜಿ ಸಲ್ಲಿಸಲು ಮೇ 9 ಕೊನೆಯ ದಿನಾಂಕ. ವಿವರಗಳಿಗೆ ಪ್ರಾಂಶುಪಾಲರನ್ನು ಭೇಟಿ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.