ಮೈಗೆ ಎಣ್ಣೆ ಹಚ್ಚಿಕೊಂಡು ಕೇಂದ್ರದತ್ತ ಬೊಟ್ಟು

mp b,y.raghavendra
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ
Published on

ಶಿವಮೊಗ್ಗ: ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದು ಇದೀಗ ಮೈಗೆ ಎಣ್ಣೆ ಹಚ್ಚಿಕೊಂಡು ಕೇಂದ್ರದತ್ತ ಬೊಟ್ಟು ಮಾಡಿ ತೋರಿಸುತ್ತಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಕಿಡಿಕಾರಿದರು.

ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 100 ದಿನ ಗ್ಯಾರಂಟಿಗಳ ಅನುಷ್ಠಾನದಲ್ಲೇ ಕಾಲ ಕಳೆದಿದೆ ಎಂದರು.
ಸಚಿವರಿಗೆ ಹೊಸ ಕಾರುಗಳನ್ನು ಖರೀದಿ ಮಾಡಿದೆ. ಆದರೆ ಬರ ಪರಿಹಾರ ವಿತರಣೆಗೆ ಹಣ ಇಲ್ಲವೆಂದು ಸರ್ಕಾರ ಹೇಳುತ್ತಿರುವುದು ಸರಿಯಲ್ಲ. ಜನರು ವಿಶ್ವಾಸವಿಟ್ಟು 135 ಸ್ಥಾನ ಗೆಲ್ಲಿಸಿ ಅಧಿಕಾರ ನೀಡಿದ್ದಾರೆ. ಅವರ ವಿಶ್ವಾಸವನ್ನು ಸರ್ಕಾರ ಉಳಿಸಿಕೊಳ್ಳಬೇಕು. ಈ ವಿಚಾರದಲ್ಲಿ ರಾಜಕೀಯ ಚೆಲ್ಲಾಟ ಮಾಡುವ ಮನಸ್ಥಿತಿ ನಮಗಿಲ್ಲ. ರಾಜ್ಯ ಸರ್ಕಾರ ಕೂಡ ಮಾಡಬಾರದು ಎಂದು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net