ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ತೋಟಗಾರಿಕೆ ಇಲಾಖೆಗೆ ಅರ್ಜಿ ಸಲ್ಲಿಸಿ

Farmer Subsidy
Published on

ಮಂಡ್ಯ: ತೋಟಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ವಿವಿಧ ಚಟುವಟಿಕೆಗಳಿಗಾಗಿ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ, ಅಂತರ ಬೇಸಾಯ, ಡೀಸಲ್ ಪಂಪ್‌ಸೆಟ್, ಕಟಾವು ಯಂತ್ರಗಳಿಗೆ ಸಹಾಯಧನ, ಹನಿ ನೀರಾವರಿ ಯೋಜನೆಯಡಿ ಸಾಮಾನ್ಯ ರೈತರಿಗೆ ಶೇ.75ರಷ್ಟು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ರೈತರಿಗೆ ಶೇ.90ರಷ್ಟು ಸಹಾಯಧನ, ನರೇಗಾ ಯೋಜನೆಯಡಿ ತೆಂಗು, ಮಾವು, ಪರಂಗಿ, ನುಗ್ಗೆ, ಗುಲಾಬಿ ಪ್ರದೇಶ ವಿಸ್ತರಣೆ, ಉದ್ಯೋಗ ಚೀಟಿ ಹೊಂದಿರುವ ಸಣ್ಣ, ಅತಿಸಣ್ಣ/ಪ.ಜಾ, ಪ.ಪಂ/ಬಿಪಿಎಲ್ ಕಾರ್ಡ್‌ದಾರರು ಗ್ರಾಮ ಪಂಚಾಯಿತಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಆರ್ಥಿಕ ಸಹಾಯ ಪಡೆಯಬಹುದು.

ಅಂತೆಯೇ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಯಾಂತ್ರೀಕರಣ, ಜೇನು ಸಾಕಾಣಿಕೆ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ರೋಗ ಕೀಟ ನಿಯಂತ್ರಣ ಕಾರ್ಯಕ್ರಮದಡಿ ವಿವಿಧ ಘಟಕಗಳಿಗೆ ಸಹಾಯಧನ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕೋಕೋ, ಕಾಳುಮೆಣಸು ಬೆಳೆಗಳ ಪ್ರದೇಶ ವಿಸ್ತರಣೆಗೆ ಸಹಾಯಧನ ನೀಡಲಾಗುವುದು. ಮಾಹಿತಿಗೆ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net