ನಿಗಮ, ಮಂಡಳಿಗೆ ನೇಮಕ ಮಾಡಿ

tenginkai
Published on

ಹುಬ್ಬಳ್ಳಿ: ಅಲೆಮಾರಿ, ಅರೆಅಲೆಮಾರಿ, ಬುಡಕಟ್ಟು ಸಮುದಾಯಗಳ ಅಭಿವೃದ್ಧಿ ಮಂಡಳಿಗಳಿಗೆ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯದ ಪ್ರತಿನಿಧಿಗಳೇ ಅಧ್ಯಕ್ಷರಾಗಬೇಕೆಂದು ಒತ್ತಾಯಿಸಿ ಸಿಂಡಿಕೇಟ್ ಸದಸ್ಯ ಶ್ರೀನಿವಾಸ ಶಾಸ್ತ್ರಿ ಅವರು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. ಸಮಾಜದ ಮುಖ್ಯ ವಾಹಿನಿಗೆ ಕರ್ನಾಟಕದ ಅಲೆಮಾರಿ, ಅರೆಅಲೆಮಾರಿ, ಬುಡಕಟ್ಟು ಸಮುದಾಯಗಳನ್ನು ಹಂತಹಂತವಾಗಿ ಅಭಿವೃದ್ಧಿಪಡಿಸಬೇಕು. ಬಿಜೆಪಿ ನೇತೃತ್ವದ ಸರ್ಕಾರವು ನಿಗಮಕ್ಕೆ ಅದೇ ಸಮುದಾಯದವರನ್ನು ನೇಮಕ ಮಾಡುವುದರ ಮೂಲಕ ಸಾಮಾಜಿಕ ನ್ಯಾಯ ಕೊಡಬೇಕೆಂದು ವಿನಂತಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net