ಕರವೇ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ

Oplus_0
ಯಳಂದೂರು ತಾಲೂಕಿನ ವೈ.ಕೆ.ಮೋಳೆ ನಾಗರಾಜುರವರಿಗೆ ಕರವೇ ರಾಜ್ಯಾಧ್ಯಕ್ಷ ಪ್ರವೀಣ್‌ಕುಮಾರ್ ಶೆಟ್ಟಿ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಆದೇಶ ಪ್ರತಿಯನ್ನು ವಿತರಿಸಿದರು.
Published on

ಯಳಂದೂರು: ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾಗಿ ವೈ.ಕೆ.ಮೋಳೆ ನಾಗರಾಜು ನೇಮಕ ಮಾಡಲಾಗಿದೆ ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್‌ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ತಾಲೂಕು ಅಧ್ಯಕ್ಷರಾಗಿದ್ದ ಇವರಿಗೆ ರಾಜ್ಯಾಧ್ಯಕ್ಷರು ಮುಂಬಡ್ತಿ ನೀಡಿ, ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಈ ಸಂಬಂಧ ಈಚೆಗೆ ಬೆಂಗಳೂರಿನ ಕರವೇ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಾಧ್ಯಕ್ಷರು ಆದೇಶ ಪತ್ರವನ್ನು ನಾಗರಾಜು ಅವರಿಗೆ ವಿತರಿಸಿದರು.
ಕರವೇ ರಾಜ್ಯ ಉಪಾಧ್ಯಕ್ಷ ಮಂಜೇಶ್, ಕಾರ್ಯದರ್ಶಿ ಜಗದೀಶ್ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net