

ಹನಗೋಡು: ಹೋಬಳಿಯ ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಕುಮಾರಸ್ವಾಮಿ ಅವರನ್ನು ಮೈಸೂರು ಜಿಲ್ಲಾ ಗ್ರಂಥಾಲಯ ಪ್ರಾಧಿಕಾರಕ್ಕೆ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಮೈಸೂರು ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಮುಂದಿನ ದಿನಗಳಲ್ಲಿ ಜರುಗುವ ಮೈಸೂರು ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಸಭೆಯಲ್ಲಿ ಭಾಗವಹಿಸಿ ಗ್ರಂಥಾಲಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ತಮ್ಮ ಸಲಹೆ-ಸೂಚನೆಗಳನ್ನು ನೀಡಿ ಸಹಕಾರ ನೀಡಬೇಕೆಂದು ಜಿಲ್ಲಾ ಗ್ರಂಥಾಲಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.