ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ನೇಮಕ

New Hegade New
Published on

ಹುಬ್ಬಳ್ಳಿ:ಶಿರಸಿಯಲ್ಲಿ ಸೆಪ್ಟೆಂಬರ್ 14ರಂದು ಜರುಗಲಿರುವ ರಾಜ್ಯ ಮಟ್ಟದ ಶಿಕ್ಷಕ ಸಾಹಿತಿಗಳ ಎಂಟನೇ ಸಮೆ್ಮೕಳನದ ಸರ್ವಾಧ್ಯಕ್ಷರಾಗಿ ಹಿರಿಯ ಪ್ರಾಧ್ಯಾಪಕ ಡಾ. ಜಿ.ಎ. ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.

ಹಿರಿಯ ವಿಚಾರವಾದಿ ಮತ್ತು ಯಕ್ಷಗಾನ ತಾಳಮದ್ದಳೆ ತಜ್ಞರು ಆಗಿರುವ ಆಫ್ರಿಕಾದ ವಿಶ್ವವಿದ್ಯಾಲಯಲ್ಲಿ ಸೇವೆ ಸಲ್ಲಿಸಿದ ಡಾ. ಜಿ.ಎ. ಹೆಗಡೆ ಅವರು ಹತ್ತಕ್ಕೂ ಹೆಚ್ಚು ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ.

ಶಿರಸಿಯ ನೆಮ್ಮದಿ ಕೇಂದ್ರ ಸಭಾಂಗಣದಲ್ಲಿ ಜರುಗಲಿರುವ ಸಮೆ್ಮೕಳನದಲ್ಲಿ ಶೈಕ್ಷಣಿಕ ಕ್ಷೇತ್ರದ ವಿಚಾರ ಗೋಷ್ಠಿ, ಚುಟುಕು ವಾಚನ ಗೋಷ್ಠಿ ನಡೆಯಲಿದೆ. ನಿವೃತ್ತಿ ಹಾಗೂ ಪ್ರತಿಭಾವಂತ ಶಿಕ್ಷಕರಿಗೆ ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರಸಾರಾಂಗ ನಿರ್ದೇಶಕ ಚನ್ನಬಸಪ್ಪ ಧಾರವಾಡಶೆಟ್ರು ಪ್ರಕಟಣೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net