

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸರ್ಕಾರ ಸಾಂವಿಧಾನಿಕ ಹುದ್ದೆ ನೀಡಿದೆ.
ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಹಾಗೂ ಸಾರ್ವಜನಿಕರ ಸಮಸ್ಯೆ ಆಲಿಸುವ ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚೆತ್ತುಕೊಂಡಿದ್ದಾರೆ.
ಸದ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಆಶ್ರಯ ಸಮಿತಿ ಅಧ್ಯಕ್ಷರಾಗಿ ಹಾಗೂ ಕೆಡಿಪಿ ಸದಸ್ಯರಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ಸ್ವತಃ ಯತೀಂದ್ರ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ. ‘15 ದಿನಗಳ ಹಿಂದೆಯೇ ನನ್ನನ್ನು ಆಶ್ರಯ ಸಮಿತಿ ಅಧ್ಯಕ್ಷರಾಗಿ ಹಾಗೂ ಕೆಡಿಪಿ ಸದಸ್ಯರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಆದೇಶ ಪತ್ರವನ್ನು ತಮಗೂ ನೀಡಲಾಗುತ್ತದೆ’ ಎಂದು ತಿಳಿಸಿದರು.