ಸುಳ್ಯ ಚುಟುಕು ಸಾಹಿತ್ಯ ಪರಿಷತ್‌ಗೆ ಅಧ್ಯಕ್ಷರ ನೇಮಕ

chutuku new
Published on

ಸುಳ್ಯ: ಮೈಸೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಚುಟುಕು ಸಾಹಿತ್ಯ ಪರಿಷತ್ತಿನ ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾಗಿ ಕವಯತ್ರಿ ಪೆರುವಾಜೆಯ ಅಶ್ವಿನಿ ಕೋಡಿಬೈಲು ನೇಮಕಗೊಂಡಿದ್ದಾರೆ.

ಅವರನ್ನು ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಸಂಸ್ಕೃತದಲ್ಲಿ ಎಂಎ ಪದವೀಧರೆಯಾಗಿರುವ ಅಶ್ವಿನಿ ಕೋಡಿಬೈಲು ಅವರ ಸೌಗಾಂಧಿಕಾ ಕವನ ಸಂಕಲನ ಬಿಡುಗಡೆಗೊಂಡಿದೆ. ಶಬರಿಮಲೆ ಸ್ವಾಮಿ ಅಯ್ಯಪ್ಪ ಎನ್ನುವ ನೃತ್ಯ ರೂಪಕ ಶಾಸ್ತ್ರೀಯ ಮತ್ತು ನೃತ್ಯ ಸಂಯೋಜನೆಗಳ ಮೂಲಕ ಜನಮನ್ನಣೆ ಪಡೆದುಕೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net