111 ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ವಿತರಣೆ

mcc 20
Published on

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸರ್ಕಾರದಿಂದ ವಿಶೇಷವಾಗಿ ನೇರ ನೇಮಕಾತಿಯಾದ 111 ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ, ಪೌರ ಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ ಆಯ್ಕೆಯಾದ 14 ಪೌರ ಕಾರ್ಮಿಕರಿಗೆ ಹಕ್ಕು ಪತ್ರ ಹಾಗೂ 64 ಪೌರ ಕಾರ್ಮಿಕರಿಗೆ ಖಾಯಂಗೊಳಿಸಿದ ಆದೇಶ ಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಶನಿವಾರ ವಿತರಿಸಿದರು.


ಶಾಸಕರಾದ ಡಿ. ವೇದವ್ಯಾಸ ಕಾಮತ್, ಮಂಜುನಾಥ್ ಭಂಡಾರಿ, ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net