ವಕೀಲ ಡಾ. ಬಿ.ಆರ್. ಅಮರನಾಥ್ ನೇಮಕ

amarnath
Published on

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ)ಯ ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವಕೀಲ ಡಾ.ಬಿ.ಆರ್. ಅಮರನಾಥ್ ಅವರನ್ನು ನೇಮಿಸಲಾಗಿದೆ. ಅಧ್ಯಕ್ಷ ಸಿ.ಎಂ.ಧನಂಜಯ್, ಅಮರನಾಥ್‌ಗೆ ನೇಮಕಾತಿ ಪತ್ರವನ್ನು ವಿತರಿಸಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್, ಶಾಸಕರಾದ ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ, ಡಾ.ಅಭಿಷೇಕ್ ಮನುಸಿಂಘಿ, ಧನಂಜಯ್, ಅಲ್ಪಸಂಖ್ಯಾತ ಕಲ್ಯಾಣ ನಿಗಮ ಅಧ್ಯಕ್ಷ ಬಿ.ಕೆ.ಅಲ್ತಾಫ್​​​​ಖಾನ್ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಂಘಟಿಸುತ್ತೇನೆ. ವಿಜಯನಗರ ಕ್ಷೇತ್ರದ ಗಾಳಿ ಆಂಜನೇಯ ದೇವಸ್ಥಾನ ವಾರ್ಡ್‌ನಲ್ಲಿ ಕಾಂಗ್ರೆಸ್ ಸಾಧನೆ ಮತ್ತು ಯೋಜನೆಗಳನ್ನು ಪ್ರತಿ ಮನೆಗಳಿಗೆ ತಲುಪಿಸಲಾಗಿದೆ. ಕಾನೂನು, ಮಾನವ ಹಕ್ಕು ಮತ್ತು ಮಾಹಿತಿ ಹಕ್ಕಿನ ಮೂಲಕ ಬಡ,ಮಧ್ಯಮ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಹೋರಾಟ ನಡೆಸುತ್ತೇನೆ ಎಂದು ಅಮರನಾಥ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net