

ಮಂಡ್ಯ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ಎಂ.ಎಸ್.ಚಿದಂಬರ್ ಅವರನ್ನು ನೇಮಕಗೊಳಿಸಲಾಗಿದೆ.
ಸ್ಥಳೀಯ ನಾಯಕರ ಸಹಕಾರದೊಂದಿಗೆ ಪಕ್ಷದ ಸಬಲೀಕರಣದಲ್ಲಿ ತಮ್ಮನ್ನು ತೊಡಗಿಸಿಕೊಂಡು ಪಕ್ಷದ ಸಂಘಟನೆಗೆ ಶ್ರಮಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೆ.7ರಂದು ಸಂಜೆ 4ಗಂಟೆಗೆ ಪದಗ್ರಹಣ ಹಾಗೂ ಭಾರತ್‌ಜೋಡೋ ಮೊದಲ ವರ್ಷದ ಸಂಭ್ರಮಾಚರಣೆ ಆಯೋಜಿಸಲಾಗಿದೆ.