

ನರಗುಂದ: ತಾಲೂಕಿನ ಕೊಣ್ಣೂರಿನ 110/11 ಕೆವಿ, ಶಿರೋಳದ 33 ಕೆವಿ ಸ್ಟೇಶನ್ ವಿದ್ಯುತ್ ವಿತರಣಾ ಉಪ-ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಜೂ. 18ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ತಾಲೂಕಿನ ಕೊಣ್ಣೂರ, ಶಿರೋಳ, ಹಿರೇಕೊಪ್ಪ, ಚಿಕ್ಕನರಗುಂದ, ಹದ್ಲಿ, ರಡ್ಡೇರನಾಗನೂರ, ಭೈರನಹಟ್ಟಿ, ವಾಸನ, ಬೆನಕನಕೊಪ್ಪ ಸೇರಿದಂತೆ 9 ಗ್ರಾಪಂ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್.ಎಂ. ಖುದಾವಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.