

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜಿಲ್ಲಾ ದಿಶಾ ಸಮಿತಿ ಸದಸ್ಯರನ್ನಾಗಿ ನಾಲ್ವರನ್ನು ನೇಮಿಸಿ ಕೇಂದ್ರ ಗ್ರಾಮೀಣಾಭಿವೃದ್ಧಿ, ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್‌ಸಿಂಗ್ ಚೌಹಾಣ್ ಆದೇಶ ಹೊರಡಿಸಿದ್ದಾರೆ.
ಎಚ್‌ಡಿಕೆ ಮನವಿ ಮೇರೆಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಮುಡಾ ಮಾಜಿ ಅಧ್ಯಕ್ಷೆ ವಿದ್ಯಾ ನಾಗೇಂದ್ರ ಹಾಗೂ ಕೆ.ಆರ್.ಪೇಟೆಯ ನರಸನಾಯಕ ಅವರನ್ನು ನೇಮಿಸಲಾಗಿದೆ. ಇವರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಸಲಹೆ ನೀಡುವ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಚರ್ಚಿಸುವ ಅಧಿಕಾರ ಹೊಂದಿದ್ದಾರೆ.