

ಮೈಸೂರು: ಶೀಘ್ರದಲ್ಲೇ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಬಿಜೆಪಿ ಮೈಸೂರು ಗ್ರಾಮಾಂತರ ಘಟಕದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ತಿಳಿಸಿದರು.
ಈ ನಿಟ್ಟಿನಲ್ಲಿ ಈಗಾಗಲೇ ವೀಕ್ಷಕರನ್ನು ನೇಮಕ ಮಾಡಲಾಗಿದ್ದು, ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ, ಪಕ್ಷದ ಮುಖಂಡರು, ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಬಳಿಕ ನೇಮಕಾತಿಯ ಆದೇಶ ಹೊರ ಬೀಳಲಿದೆ ಎಂದು ತಿಳಿಸಿದರು.
ಬಿಜೆಪಿ ಮಾಧ್ಯಮ ವಕ್ತಾರ ವಸಂತ್ ಕುಮಾರ್ ಮಾತನಾಡಿ, ‘ರಾಜಕೀಯ ಭೀಷ್ಮ’ ಎಂದೇ ಪ್ರಖ್ಯಾತರಾಗಿರುವ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ಘೋಷಣೆ ಮಾಡಿದ್ದು, ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದರು.