

ಮಂಡ್ಯ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನೇಮಿಸಿಕೊಳ್ಳಲಾಗಿದ್ದ ಪ್ಯಾನಲ್ ವಕೀಲರ 3 ವರ್ಷಗಳ ಸೇವಾ ಅವಧಿ ಜೂ.30ರಂದು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಹೊಸದಾಗಿ ನೇಮಕಾತಿಗೆ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಲ್ಲಿ ಅರ್ಜಿ ಪಡೆದು ಮೇ.2ರ ಸಂಜೆ 5ಗಂಟೆಯೊಳಗೆ ಸಲ್ಲಿಸಬಹುದಾಗಿದೆ. ಮಾಹಿತಿಯನ್ನು ಪ್ರಾಧಿಕಾರ ಹಾಗೂ ಜಿಲ್ಲೆಯ ಎಲ್ಲ ನ್ಯಾಯಾಲಯದ ಆವರಣದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.