

ಗದಗ: ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಆದೇಶಿಸಲಾಗಿದೆ. ಜನರಲ್ ಮೆಡಿಸನ್, ಜನರಲ್ ಸರ್ಜರಿ, ಚಿಕ್ಕಮಕ್ಕಳ ತಜ್ಞರು, ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರು, ಅರಿವಳಿಕೆ ತಜ್ಞರು, ಆರ್ಥೋಪೆಡಿಕ್ಸ್, ಇಎನ್‌ಟಿ, ಚರ್ಮರೋಗ, ದಂತ ವೈದ್ಯರು ಸೇರಿದಂತೆ ಇತರ ವೃತ್ತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಮೇ 23ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.