

ತುಮಕೂರು: ಶಿರಾ ಉಪಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ಬಿಜೆಪಿ ಅಭ್ಯರ್ಥಿ ಆಯ್ಕೆ ಕುತೂಹಲ ಮೂಡಿಸಿದೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅ.15ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಸಭೆಯಲ್ಲಿ ಜಿಲ್ಲೆಯ ಪ್ರಮುಖ ನಾಯಕರು ಭಾಗವಹಿಸಿದ್ದು ಡಾ.ಜಿ.ಪರಮೇಶ್ವರ ನೇತೃತ್ವದ ಚುನಾವಣಾ ಉಸ್ತುವಾರಿ ಸಮಿತಿಗೆ 51 ಮುಖಂಡರನ್ನು ಸೇರಿಸಲಾಗಿದೆ.
ಉಪಾಧ್ಯಕ್ಷರನ್ನಾಗಿ ಮಾಜಿ ಶಾಸಕ ಕೆ.ಎನ್.ರಾಜಣ್ಣ, ಸಂಚಾಲಕರಾಗಿ ಮಾಜಿ ಸಂಸದ ಎಸ್.ಪಿಮುದ್ದಹನುಮೇಗೌಡ, ಬಿ.ಎಚ್.ಚಂದ್ರಪ್ಪ ಅವರನ್ನು ನೇಮಿಸಿದ್ದು ಇವರೊಂದಿಗೆ ಮಾಜಿ ಮಂತ್ರಿ, ಶಾಸಕರು, ಮಾಜಿ ಶಾಸಕರನ್ನೊಳಗೊಂಡ 47 ಸದಸ್ಯರಿಗೆ ಅ.15ರಂದು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಹಾಜರಿರಲು ಸೂಚಿಸಲಾಗಿದೆ.
ಎಲ್ಲ ಮುಖಂಡರಿಗೆ ಕ್ಷೇತ್ರದಲ್ಲಿಯೇ ವಾಸ್ತವ್ಯ ಮಾಡಲು ಸೂಚಿಸಲಾಗಿದ್ದು ಗ್ರಾಮಗಳಲ್ಲಿಯೇ ಕಾರ್ಯಕರ್ತರ ಮನೆಯಲ್ಲಿ ಉಳಿಯಲು ವ್ಯವಸ್ಥೆ ಮಾಡಲಾಗಿದೆ ಎನ್ನಲಾಗಿದೆ, ಕ್ಷೇತ್ರದಲ್ಲಿ ಗುರುವಾರದಿಂದ ಅಬ್ಬರದ ಪ್ರಚಾರ ಆರಂಭವಾಗಲಿದೆ.
ಬಿಜೆಪಿ ಅಭ್ಯರ್ಥಿ ಆಯ್ಕೆ ಕುತೂಹಲ: ಶಿರಾ ಉಪಸಮರದಲ್ಲಿ ಗೆಲ್ಲುವ ವಿಶ್ವಾಸದಲ್ಲಿರುವ ಆಡಳಿತರೂಢ ಬಿಜೆಪಿ ಅಭ್ಯರ್ಥಿ ೋಷಣೆಯಲ್ಲಿ ತಡಮಾಡುತ್ತಿರುವುದು ಕುತೂಹಲ ಹೆಚ್ಚಿಸಿದೆ. ಡಾ.ರಾಜೇಶ್‌ಗೌಡ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದ್ದು ಭಾನುವಾರ ಸಂಜೆ ದೆಹಲಿಯಲ್ಲಿ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಅಂತಿಮ ೋಷಣೆ ಹೊರಬೀಳುವ ಸಾಧ್ಯತೆಯಿದೆ.
ಕ್ಷೇತ್ರದಲ್ಲಿ ಈಗಾಗಲೇ ಪ್ರಚಾರ ನಡೆಸುತ್ತಿರುವ ಬಿಜೆಪಿ ಯಾರೇ ಅಭ್ಯರ್ಥಿಯಾದರೂ ಪ್ರಬಲ ಸ್ಫರ್ಧೆ ಒಡ್ಡಲು ಕಸರತ್ತು ನಡೆದಿದೆ. ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬರುವಿಕೆಗಾಗಿ ಜೆಡಿಎಸ್ ಕಾರ್ಯಕರ್ತರು ಕಾಯುತ್ತಿದ್ದಾರೆ.
15ಕ್ಕೆ ಟಿಬಿಜೆ ಮತ್ತೊಮ್ಮೆ ನಾಮಪತ್ರ: ಬಿ.ಾಂ ಇಲ್ಲದೆಯೇ ತರಾತುರಿಯಲ್ಲಿ ಕಳೆದ ಶುಕ್ರವಾರ ನಾಮಪತ್ರ ಸಲ್ಲಿಸಿದ್ದ ಟಿ.ಬಿ.ಜಯಚಂದ್ರ, ಅ.15ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಾ ಅವರು ಕೂಡ 15ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ, ಕರೊನಾ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಅಮ್ಮಾಜಮ್ಮ ಅವರು ಕಾರ್ಯಕರ್ತರನ್ನು ಸೇರಿಸಿ ಶಕ್ತಿ ಪ್ರದರ್ಶನದ ಜತೆಗೆ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ಕೂಡ ಅಂದೇ ತನ್ನ ಶಕ್ತಿ ಪ್ರದರ್ಶನ ನಡೆಸಲಿದೆ.
ಜಯಣ್ಣ ನೀನು 78ರ ಮಾಡೆಲ್..: ಕೆಪಿಸಿಸಿ ಕಚೇರಿಯಲ್ಲಿನ ಸಭೆಯಲ್ಲಿ ಜಯಚಂದ್ರ ಅವರನ್ನು ಅಧ್ಯಕ್ಷ ಡಿ.ಕೆ.ಶಿವಕುಮಾರ್ ‘ಏ ಜಯಚಂದ್ರ ನೀನು 78ರ ಮಾಡೆಲ್ ಕಣಯ್ಯ ಎಣದು ಕಾಲೇಳೆದಿದ್ದು, ಬದಲಾಗಬೇಕು, ಈಗಿನ ಕಾಲದ ಯುವಕರನ್ನು ಜತೆಗೆ ಕರೆದುಕೊಂಡು ಚುನಾವಣೆ ನಡೆಸಬೇಕು, ಕ್ಷೇತ್ರದಲ್ಲಿ ಎಲ್ಲರನ್ನೂ ಸರಿಮಾಡಿಕೊಳ್ಳಬೇಕು ಎಂದು ಶಿವಕುಮಾರ್ ಸೂಚಿಸಿದ್ದಾರೆ ಎನ್ನಲಾಗಿದೆ.