

ಮೈಸೂರು: ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಜಿಲ್ಲಾ ಮಹಿಳಾ ಘಟಕದ ನೂತನ ಅಧ್ಯಕ್ಷರನ್ನಾಗಿ ಸುಜಾತಾ ಷಣ್ಮುಗಂ ಅವರನ್ನು ನೇಮಕ ಮಾಡಲಾಗಿದೆ ಎಂದು ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ತಿಳಿಸಿದರು.
ಸುಜಾತಾ ಅವರು ಘಟಕದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ವೇದಿಕೆ ಬಲಪಡಿಸಲು ಅವರಿಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ಗಾಯತ್ರಿ ವಿಜಯೇಂದ್ರ ಅವರನ್ನು ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವೇದಿಕೆ ನಗರಾಧ್ಯಕ್ಷ ಲೋಕೇಶ್ ಕುಮಾರ್, ಯುವ ಘಟಕದ ಅಧ್ಯಕ್ಷ ಹೇಮಂತ್ ಇತರರಿದ್ದರು.