

ಪುತ್ತೂರು ಗ್ರಾಮಾಂತರ: ಜನತೆ ವಿವಿಧ ರೀತಿಯ ಅನಾರೋಗ್ಯದಿಂದ ತತ್ತರಿಸುತ್ತಿರುವ ಕಾಲಘಟ್ಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆರೋಗ್ಯ ಶಿಬಿರ ನಡೆಸುತ್ತಿರುವುದು ಶ್ಲಾಘನೀಯ ಎಂದು ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೊಡ್ಲು ಹೇಳಿದರು.
ಬಡಗನ್ನೂರು ಗ್ರಾಪಂನಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಪುತ್ತೂರು ತಾಲೂಕು ವತಿಯಿಂದ, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿ ಅರಿಯಡ್ಕ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಮತ್ತು ಬಡಗನ್ನೂರು ಗ್ರಾಪಂ ಸಹಯೋಗದಲ್ಲಿ, ಮಂಗಳೂರಿನ ಅತ್ತಾವರದ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರಿಂದ ನಡೆದ ಆರೋಗ್ಯ ಉಚಿತ ತಪಾಸಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಡಗನ್ನೂರು ಗ್ರಾಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ ಅಧ್ಯಕ್ಷತೆ ವಹಿಸಿದ್ದರು. ಕೆಎಂಸಿ ಆಸ್ಪತ್ರೆಯ ಡಾ.ಉದಯ್ ಮಾಹಿತಿ ನೀಡಿದರು. ಇಎನ್ಟಿ ತಜ್ಞ ಕಾರ್ತಿಕ್, ಅರಿಯಡ್ಕ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ವಿಕ್ರಂ ರೈ ಸಾಂತ್ಯ, ಒಕ್ಕೂಟ ವಲಯಾಧ್ಯಕ್ಷ ದಿನೇಶ್ ರೈ ಕುತ್ಯಾಳ, ಬಡಗನ್ನೂರು ಪಿಡಿಒ ಮೋನಪ್ಪ ಕೆ, ವಲಯ ಭಜನಾ ಪರಿಷತ್ ಅಧ್ಯಕ್ಷ ಗಂಗಾಧರ್ ರೈ, ಎ ಒಕ್ಕೂಟ ಅಧ್ಯಕ್ಷ ಸುಬ್ಬಯ್ಯ ರೈ, ಗ್ರಾಪಂ ಸದಸ್ಯ ಸಂತೋಷ್ ಆಳ್ವ ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕ ಹರೀಶ್ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಸಾವಿತ್ರಿ ಪೊನ್ನೆತ್ತಡ್ಕ ವಂದಿಸಿದರು. ಸಮನ್ವಯಾಧಿಕಾರಿ ಕಾವ್ಯಶ್ರೀ ಅಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಪಟ್ಟೆ ಒಕ್ಕೂಟದ ಅಧ್ಯಕ್ಷೆ ವಸಂತಿ, ಪಡುವನ್ನೂರು ಆಶಾ ಕಾರ್ಯಕರ್ತೆಯರಾದ ವಿಜಯಲಕ್ಷ್ಮೀ ಹಾಗೂ ಸುಜಾತ ಸಹಕರಿಸಿದರು.