ಉದ್ಯಮಿ ಅಜೀಂ ಪ್ರೇಮ್‌ಜಿ ಸಮಾಜಮುಖಿ ಕಾರ್ಯಗಳನ್ನು ಗೌರವಿಸಿ

25SPT7
ಸೋಮವಾರಪೇಟೆ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ವಾರದ ಆರು ದಿನಗಳ ಪೂರಕ ಪೌಷ್ಟಿಕ ಆಹಾರವನ್ನು ವಿತರಿಸುವ ಕಾರ್ಯಕ್ರಮಕ್ಕೆ ಸೋಮವಾರಪೇಟೆ ಶಾಸಕ ಡಾ.ಮಂತರ್ ಗೌಡ ಮಕ್ಕಳಿಗೆ ಮೊಟ್ಟೆ ವಿತರಿಸುವ ಮೂಲಕ ಚಾಲನೆ ನೀಡಿದರು. ನತೀಶ್, ಸುರೇಶ್‌ಶೆಟ್ಟಿ, ದಿನೇಶ್, ಭಾಗ್ಯಮ್ಮ ಇದ್ದರು.
Published on

ಸೋಮವಾರಪೇಟೆ: ನಮ್ಮಲ್ಲಿರುವ ಸಂಪತ್ತಿನಲ್ಲಿ ಸ್ವಲ್ಪ ಭಾಗವನ್ನಾದರೂ ಸಮಾಜ ಸೇವೆಗೆ ಮುಡಿಪಾಗಿಡಬೇಕು. ಉದ್ಯಮಿ ಅಜೀಂ ಪ್ರೇಮ್ ಜಿ ಅವರ ಸಮಾಜಮುಖಿ ಕಾರ್ಯಗಳನ್ನು ನಾವು ಗೌರವಿಸಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಅಕ್ಷರ ದಾಸೋಹ ಮಧ್ಯಾಹ್ನ ಉಪಾಹಾರ ಯೋಜನೆಯಡಿ ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು ಪ್ರಾರಂಭಿಸಲಾದ ನೂತನ ಯೋಜನೆಯಾದ ವಾರದ ಆರು ದಿನಗಳ ಪೂರಕ ಪೌಷ್ಟಿಕ ಆಹಾರವನ್ನು ವಿತರಿಸುವ ಕಾರ್ಯಕ್ರಮಕ್ಕೆ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ಬುಧವಾರ ಚಾಲನೆ ನೀಡಿ ಮಾತನಾಡಿದರು.

ಶಿಕ್ಷಣ ಮತ್ತು ಆರೋಗ್ಯದೊಂದಿಗೆ ಪೌಷ್ಟಿಕ ಆಹಾರವನ್ನು ಪೂರೈಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಕ್ರಮ. ಇದರೊಂದಿಗೆ ಶಿಕ್ಷಣ ಇಲಾಖೆಯ ಉನ್ನತಿಗಾಗಿ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಇನ್ನಷ್ಟು ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡಿದ್ದಾರೆ. ಶಿಕ್ಷಕರು ಶಾಲಾ ಮಕ್ಕಳಿಗೆ ಅಜೀಂ ಪ್ರೇಮ್ ಜಿ ಅವರ ಸಾಧನೆಗಳ ಕುರಿತು ತಿಳಿ ಹೇಳಬೇಕೆಂದರು.

ತಾಲೂಕು ಪಂಚಾಯಿತಿ ಇಒ ಪರಮೇಶ್‌ಕುಮಾರ್ ಮಾತನಾಡಿ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಅವಶ್ಯವಿರುವ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಒದಗಿಸಿಕೊಡಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೌಡ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನತೀಶ್ ಮಂದಣ್ಣ ವಹಿಸಿದ್ದರು. ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯ ಸಿ.ಬಿ.ಸುರೇಶ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಕ್ಷೇತ್ರ ಸಮನ್ವಯಾಧಿಕಾರಿ ಮಂಜೇಶ್, ಅಕ್ಷರ ದಾಸೋಹ ಸಹಾಯಕ ನಿರ್ದೆಶಕ ಕಾಳನಾಯಕ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಯಶೋದಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net