ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಶ್ಲಾಘನೆ: ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಈ.ಸಿ.ನಿಂಗರಾಜ್‌ಗೌಡ ಮೆಚ್ಚುಗೆ

Dr.E.C.Ningajaregowda
Published on

ಮಂಡ್ಯ: ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಉಗ್ರ ನೆಲೆಗಳನ್ನು ನಾಶ ಮಾಡಿದ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜ್‌ಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯಶ್ವಸಿ ಕಾರ್ಯಚರಣೆಗೆ ಕಾರಣಕರ್ತರಾದ ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್‌ಸಿಂಗ್, ಕೇಂದ್ರ ಗೃಹಮಂತ್ರಿ ಅಮಿತ್ ಷಾ, ಸೈನ್ಯದ ಮುಖ್ಯಸ್ಥರು ಹಾಗೂ ಸೈನಿಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಭಾರತೀಯ ಸೇನೆ ಉಗ್ರರ ವಿರುದ್ಧ ಕೈಗೊಂಡ ಪ್ರಮುಖ ಕ್ರಮ. ಇದು ಭಾರತ ಉಗ್ರರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತಿರುವುದನ್ನು ಪ್ರತಿಬಿಂಬಿಸುತ್ತದೆ. ಈ ಕಾರ್ಯಾಚರಣೆಯನ್ನು ಭಾರತವೂ ಮುಂದುವರೆಸಿ ಪಾಕಿಸ್ತಾನದ ಎಲ್ಲ ಉಗ್ರಗಾಮಿ ಭಯೋತ್ಪಾದನೆ ತರಬೇತಿ ಶಿಬಿರಗಳನ್ನೂ ಸಂಪೂರ್ಣವಾಗಿ ನಾಶ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ವಿದೇಶಾಂಗ ನೀತಿಯ ಪರಿಣಾಮವಾಗಿ ವಿಶ್ವದ ಬಹುತೇಕ ದೇಶಗಳು ಭಾರತವನ್ನು ಬೆಂಬಲಿಸುತ್ತಿವೆ. ಇದರ ಸದುಪಯೋಗವನ್ನು ಭಾರತ ಪಡೆದು ಈ ಕೂಡಲೇ ಪಾಕ್ ಆಕ್ರಮಿತ ಕಾಶ್ಮೀರವನ್ನೂ ಸಂಪೂರ್ಣವಾಗಿ ವಶಪಡಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಹಲ್ಗಾಮ್ ದಾಳಿಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ, ದಾಳಿಯ 3 ದಿನ ಮೊದಲೇ ಗೋತ್ತಿತ್ತೆಂದು ಆಧಾರರಹಿತ ಕೀಳುಮಟ್ಟದ ಹೇಳಿಕೆ ನೀಡಿರುವುದು ಖಂಡನೀಯ. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರೇ ಈ ರೀತಿಯ ಬಾಲಿಶ ಹೇಳಿಕೆ ನೀಡಿದರೆ, ಆ ಪಕ್ಷದ ಕಾರ್ಯಕರ್ತರ ಮನಸ್ಥಿತಿ ಇನ್ನೂ ಯಾವ ರೀತಿ ಇರಲೂ ಸಾಧ್ಯ ಎಂದು ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net