ಅಂಗಾಂಗ ದಾನಿಗಳ ಕುಟುಂಬಕ್ಕೆ ಪ್ರಶಂಸಾ ಪತ್ರ

organ donation
Published on

ಬೆಂಗಳೂರು: ಅಂಗಾಂಗ ದಾನಿಗಳ ಕುಟುಂಬದ ಸದಸ್ಯರಿಗೆ ಪ್ರತಿ ವರ್ಷ ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಂಸಾ ಪತ್ರಗಳನ್ನು ನೀಡಿ ಗೌರವಿಸಲು ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಆರೋಗ್ಯ ಇಲಾಖೆಯು, ರಾಜ್ಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ (ಸೊಟ್ಟೊ) ಅಡಿ ಅಂಗಾಂದ ದಾನ ಮಾಡಿದವರ ಮಾಹಿತಿಯನ್ನು ಪಡೆಯಬೇಕು. ಅಂಗಾಂಗ ದಾನ ಮಾಡಿದ 10 ದಿನಗಳ ಒಳಗೆ ಅಂಗಾಂಗ ದಾನಿಯ ಕುಟುಂಬದವರಿಗೆ ರಾಜ್ಯ ಸರ್ಕಾರದ ಪರವಾಗಿ ಪ್ರಶಂಸಾ ಪತ್ರವನ್ನು ನೀಡಿ, ಗೌರವಿಸುವ ಬಗ್ಗೆ ಕ್ರಮವಹಿಸಬೇಕು. ಬಳಿಕ ಸಾರ್ವಜನಿಕ ಸಮಾರಂಭಗಳಾದ ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವದಲ್ಲಿ ಜಿಲ್ಲಾಡಳಿತ ವತಿಯಿಂದ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಬೇಕು ಎಂದು ತಿಳಿಸಲಾಗಿದೆ.

2023ನೇ ಸಾಲಿನಿಂದ 2024ರ ಜುಲೈವರೆಗೆ ಅಂಗಾಂಗ ದಾನ ಮಾಡಿದ ಕುಟುಂಬದ ಸದಸ್ಯರಿಗೆ ಮುಂಬರುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಪ್ರಶಂಸಾ ಪತ್ರ ನೀಡಿ, ಗೌರವಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net