ಅನ್ಯ ದೇಶಗಳಿಂದ ಸಂವಿಧಾನ ಮೆಚ್ಚುಗೆ

FotoJet
Published on

ಕೋಲಾರ: ಡಾ.ಬಿ.ಆರ್​.ಅಂಬೇಡ್ಕರ್​ ಅವರು ಅನ್ಯ ದೇಶಗಳು ಮೆಚ್ಚಿಕೊಳ್ಳುವಂತ ಸಂವಿಧಾನ ರಚಿಸಿ ಕೊಡುಗೆಯಾಗಿ ನೀಡಿದ್ದಾರೆ. ಯುವಕರು ಅಧ್ಯಯನ ಮಾಡಿ ಆಶಯಗಳನ್ನು ಈಡೇರಿಸಲು ಮುಂದಾಗಬೇಕು ಎಂದು ವಿಧಾನ ಪರಿಷತ್​ ಸದಸ್ಯ ಎಂ.ಎಲ್​.ಅನಿಲ್​ಕುಮಾರ್​ ಹೇಳಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಸಂವಿಧಾನ ದಿನ ಉದ್ಘಾಟಿಸಿ ಮಾತನಾಡಿ, ಸಂವಿಧಾನ ರಚನಾ ಸಭೆಯಲ್ಲಿ 250ಕ್ಕೂ ಹೆಚ್ಚು ಸದಸ್ಯರು ಇದ್ದರು, ಅವರಲ್ಲಿ ಪ್ರಮುಖವಾಗಿ ಬಿ.ಆರ್​.ಅಂಬೇಡ್ಕರ್​ ಹೊರಹೊಮ್ಮಿದ್ದಾರೆ. ಹೀಗಾಗಿ, ಅವರನ್ನ ಸಂವಿಧಾನ ಕರ್ತೃ ಎಂದು ಹೇಳಲಾಗುತ್ತದೆ. ಜನಸಾಮಾನ್ಯರಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಸಂವಿಧಾನ ದಿನ ಬಳಸಿಕೊಳ್ಳಲಾಗುತ್ತಿದೆ ಎಂದರು.

ಎಲ್ಲ ಧರ್ಮ ಗ್ರಂಥಗಳು ಆಯಾ ಧರ್ಮಿಯರು ಹೇಗೆ ಬಾಳಬೇಕು ಎಂಬುದನ್ನು ಹೇಳುತ್ತವೆ. ಆದರೆ ಎಲ್ಲ ಧರ್ಮಿಯರು ಹೇಗೆ ಬಾಳಬೇಕು ಎಂಬುದನ್ನು ಸಂವಿಧಾನ ಹೇಳುತ್ತದೆ. ಸಂವಿಧಾನದಲ್ಲಿ 448 ವಿಧಿಗಳು, 25 ಭಾಗಗಳು, 12 ಶೆಡ್ಯೂಲ್​, 5 ಅನುಬಂಧಗಳು ಹಾಗೂ 98 ತಿದ್ದುಪಡಿಗಳಿವೆ. ಸಂವಿಧಾನ ರಚನಾ ಸಮಿತಿಯಲ್ಲಿ 284 ಮಂದಿ ಸದಸ್ಯರ ಪೈಕಿ 15 ಮಂದಿ ಮಹಿಳಾ ಸದಸ್ಯರಿದ್ದರು. ಅದರ ಕರಡನ್ನು 1949ರ ನವೆಂಬರ್​ನಲ್ಲಿ ಸಲ್ಲಿಸಲಾಯಿತು. ಸಲ್ಲಿಸಿದ ಬಳಿಕವೂ ಅದನ್ನು ಪೂರ್ಣಗೊಳಿಸಲು ಮೂರು ವರ್ಷ ಬೇಕಾಯಿತು ಎಂದು ವಿವರಿಸಿದರು.

ಸಮಾಜದಲ್ಲಿನ ಎಲ್ಲ ವರ್ಗದ ಜನರಿಗೆ ಸಂವಿಧಾನವು ಸಮಾನತೆಯ ಹಕ್ಕನ್ನು ಕಲ್ಪಿಸಿದೆ. ಜತೆಗೆ ತಾರತಮ್ಯ ತೊಡೆದುಹಾಕಲು ಕಾನೂನುಗಳನ್ನು ರೂಪಿಸಿರುವ ಮಾದರಿ ಸಂವಿಧಾನವಾಗಿ ನಿಂತಿದೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ಹೇಳಿದರು.

ಅಪರ ಜಿಲ್ಲಾಧಿಕಾರಿ ಮಂಗಳಾ, ಉಪವಿಭಗಾಧಿಕಾರಿ ಡಾ.ಮೈತ್ರಿ, ನಗರಸಭೆ ಅಧ್ಯೆ ಲಕ್ಷಿ$್ಮದೇವಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್​, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷಿ$್ಮ, ತಹಶೀಲ್ದಾರ್​ ನಯನಾ ಇದ್ದರು.

ಆಶಯ ಈಡೇರಿಸಿ

ವಿಶ್ವದಲ್ಲೇ ದೊಡ್ಡ ಲಿಖಿತ ಸಂವಿಧಾನ. ಇದರ ಆಶಯವನ್ನು ತಿಳಿದು ಮೂಲಭೂತ ಹಕ್ಕು ಪಡೆದು, ಕರ್ತವ್ಯಗಳನ್ನು ಪ್ರತಿಯೊಬ್ಬರು ಪಾಲನೆ ಮಾಡಲು ಮುಂದಾಗಬೇಕು. ಸರ್ಕಾರ ಸಂವಿಧಾನದ ಮೂಲಕ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳ ಅಧಿಕಾರದ ವ್ಯಾಖ್ಯಾನ ಮಾಡುತ್ತದೆ. ಪ್ರಜೆಗಳ ಹಕ್ಕು ಮತ್ತು ಕರ್ತವ್ಯಗಳನ್ನು ರ್ನಿದಿಷ್ಟಪಡಿಸುತ್ತದೆ. ಎಲ್ಲ ಕಾನೂನಿಗಿಂತ ಸಂವಿಧಾನವೇ ಮಿಗಿಲು. ಹೀಗಾಗಿ, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕಾನೂನು ರೂಪಿಸಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net