ಸುಳ್ಯ ತಾಲೂಕು ಆಸ್ಪತ್ರೆ ಡಯಾಲಿಸಿಸ್ ಕೇಂದ್ರಕ್ಕೆ ಆರೋಗ್ಯ ಸಚಿವರ ಮೆಚ್ಚುಗೆ

sullia
Published on


ಮಂಗಳೂರು :-ಸುಳ್ಯ ತಾಲೂಕು ಆಸ್ಪತ್ರೆಗೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.

 ಆಸ್ಪತ್ರೆಯ ವಾರ್ಡ್‍ಗಳು, ಐಸಿಯು ಘಟಕ ಸೇರಿದಂತೆ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಸಚಿವರು, ಅಲ್ಲಿನ ಕಾರ್ಯನಿರ್ವಹಣೆಗಳ ಬಗ್ಗೆ ಮಾಹಿತಿ ಪಡೆದರು. ರೋಗಿಗಳೊಂದಿಗೆ ಸಮಾಲೋಚಿಸಿದ ಸಚಿವರು, ಚಿಕಿತ್ಸಾ ಗುಣಮಟ್ಟವನ್ನು ಪರಿಶೀಲಿಸಿದರು.

ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು, ಅಲ್ಲಿನ ಎಲ್ಲ ಹಾಸಿಗೆಗಳಲ್ಲಿಯೂ ರೋಗಿಗಳು ಭರ್ತಿಯಾಗಿ ಪೂರ್ಣಪ್ರಮಾಣದಲ್ಲಿ ಸುಸಜ್ಜಿತವಾಗಿ ಡಯಾಲಿಸಿಸ್ ಕೇಂದ್ರ ಕಾರ್ಯಾಚರಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ರೋಗಿಗಳಿಗೆ ಉತ್ತಮ ಗುಣಮಟ್ಟದ ಡಯಾಲಿಸಿಸ್ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗಳನ್ನು ಶ್ಲಾಘಿಸಿದರು.

ಬಳಿಕ ಆಸ್ಪತ್ರೆಯ ವೈದ್ಯರೊಂದಿಗೆ ಸಮಾಲೋಚಿಸಿದರು. ಸುಳ್ಯ ತಾಲೂಕು ಆಸ್ಪತ್ರೆಗೆ ಶೀಘ್ರದಲ್ಲೇ ಸ್ತ್ರೀರೋಗ ಮತ್ತು ಹೆರಿಗೆ ತಜ್ಞ ವೈದ್ಯರನ್ನು ನೇಮಿಸಲು ಸಚಿವರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರಿಗೆ ಸೂಚಿಸಿದರು. ಅಲ್ಲದೇ, ಎಕ್ಸ್ ರೇ ಘಟಕಕ್ಕೆ ಸೂಕ್ತ ಸಿಬ್ಬಂದಿ ನೇಮಿಸಲು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net