ಅವ್ಯವಹಾರ ಮಾಡಿದರೆ ಸೂಕ್ತ ಕ್ರಮ

7S7S7S7S
ಅವ್ಯವಹಾರ ಮಾಡಿದರೆ ಸೂಕ್ತ ಕ್ರಮ
Published on

ವಿಜಯಪುರ : ಜಿಲ್ಲೆಯಲ್ಲಿ ಖಾಲಿ ಇರುವ 313 ಅಂಗನವಾಡಿ ಕಾರ್ಯಕರ್ತೆ ಹಾಗೂ 857 ಅಂಗನವಾಡಿ ಸಹಾಯಕಿಯರನ್ನು ಗೌರವ ಧನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯಾವುದೇ ಮಧ್ಯವರ್ತಿಗಳು, ಅಧಿಕಾರಿ, ಸಿಬ್ಬಂದಿಗಳು ಅನ್ಯ ಮಾರ್ಗದಿಂದ ಆಯ್ಕೆಯಾಗಿ ಹಣದ ಬೇಡಿಕೆ ಇಟ್ಟಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್​ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಆಯ್ಕೆ ಪ್ರಕ್ರಿಯೆಯ ಮುನ್ನ ಪ್ರಥಮ ಹಂತದಲ್ಲಿ ತಹಸೀಲ್ದಾರ್​ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಅರ್ಜಿ ಪರಿಶೀಲಿಸಿ ನಂತರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಇಲಾಖಾ ಮಾರ್ಗಸೂಚಿಯಂತೆ ಪಾರದರ್ಶಕವಾಗಿ ಆಯ್ಕೆಯು ನಡೆಯುತ್ತದೆ. ನೇಮಕಾತಿ ಬಯಸುವ ಅಭ್ಯರ್ಥಿಗಳು ಯಾವುದೇ ಹಣಕಾಸಿನ ವ್ಯವಹಾರ ಮಾಡಿ ಮೋಸ ಹೋಗದಂತೆ ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net