ಬಿ ಖಾತಾ ಅನುಮೋದನೆಯಿಂದ ಬಡವರಿಗೆ ಅನುಕೂಲ: ರಕ್ಷಿತ್ ಶಿವರಾಂ ಬಣ್ಣನೆ

Published on

ಬೆಳ್ತಂಗಡಿ: ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆ ಹಾಗೂ ಭೂ ಪರಿವರ್ತನೆಯಾಗದೆ ಉಪವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ ಹಾಗೂ ಕಟ್ಟಡಗಳಿಗೆ ಬಿ ಖಾತಾ ನೀಡುವ ಐತಿಹಾಸಿಕ ನಿರ್ಧಾರವನ್ನು ಸಿದ್ದರಾಮಯ್ಯ ಸರ್ಕಾರ ಕೈಗೊಂಡಿದ್ದು, ರಾಜ್ಯ ಸರ್ಕಾರ ಮತ್ತೆ ಬಡವರ ಪರವಾಗಿದೆ ಎಂಬುದನ್ನು ಸಾಬೀತು ಮಾಡಿದೆ. ಇದರಿಂದ ರಾಜ್ಯದ 33 ಲಕ್ಷ ಕುಟುಂಬಗಳ ಜತೆ ಬೆಳ್ತಂಗಡಿ ನಗರವಾಸಿಗಳ ಹಲವು ವರ್ಷಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ ಖಾತಾ ವಿಚಾರಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪಪಂ ವ್ಯಾಪ್ತಿಯಲ್ಲಿ ವಾರ್ಡ್‌ವಾರು ಮಾಹಿತಿ ನೀಡುವಂತೆ ಸೂಚಿಸಲಾಗಿದ್ದು, ರಾಜ್ಯಮಟ್ಟದಲ್ಲಿ ಸ್ಥಾಪಿಸಲಾದ ಸಹಾಯವಾಣಿ 6366674001 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಉಪ್ಪಿನಂಗಡಿ-ಗುರುವಾಯನಕೆರೆ ರಸ್ತೆ ಮೂಲಕ ಬಂದಾಗ ಕೆಟ್ಟು ಹೋದ ರಸ್ತೆಯ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆಯಾದರೂ ಕಾಮಗಾರಿ ಆರಂಭಗೊಳ್ಳದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮರುದಿನ ಶಿಲಾನ್ಯಾಸ ಮಾಡಲಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಶೇಖರ ಕುಕ್ಕೇಡಿ, ತಾಲ್ಲೂಕು ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್, ನಪಂ ಸದಸ್ಯರಾದ ಜಗದೀಶ್ ಡಿ, ಜನಾರ್ದನ್, ಪ್ರಮುಖರಾದ ಲಕ್ಷ್ಮಣ ಗೌಡ, ಹೆನ್ರಿ ಲೋಬೋ, ಅಬ್ದುಲ್ ಬಶೀರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net