

ವಿಜಯಪುರ: ಸಂಸ್ಥೆಯ ಸೇವೆಯನ್ನು ರಾಷ್ಟ್ರವ್ಯಾಪಿ ವಿಸ್ತರಿಸುವ ಸದುದ್ದೇಶದಿಂದ ಬಿಜಾಪುರ ಲಿಂಗಾಯತ ಡಿಸ್ಟ್ರಿಕ್ಟ್ ಎಜುಕೇಷನ್ ಅಸೋಸಿಯೇಷನ್ ಹೆಸರನ್ನು ಭಾರತೀಯ ಲಿಂಗಾಯತ ಡೆವಲೆಪ್ಮೆಂಟ್ ಎಜುಕೇಷನ್ ಅಸೋಸಿಯೇಷನ್ ಎಂದು ಬದಲಾಯಿಸಲು ಭಾನುವಾರ ನಡೆದ ಬಿಎಲ್ಡಿಇ ಸಂಸ್ಥೆಯ ಸರ್ವ ಸದಸ್ಯರ ವಿಶೇಷ ಸಭೆಯಲ್ಲಿ ಒಕ್ಕೊರಲಿನಿಂದ ಅನುಮೋದನೆ ನೀಡಲಾಯಿತು.
ಸಂಸ್ಥೆ ಅಧ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸಭೆ ಅಧ್ಯತೆ ವಹಿಸಿ ಮಾತನಾಡಿ, 1910ರಲ್ಲಿ ವಿಜಯಪುರದಲ್ಲಿ ಬಿಜಾಪುರ ಲಿಂಗಾಯತ ಡಿಸ್ಟ್ರಿಕ್ಟ್ ಎಜುಕೇಷನಲ್ ಅಸೋಸಿಯೇಷನ್ ಸ್ಥಾಪನೆಯಾಗಿತ್ತು. ಸದ್ಯ ವಿಜಯಪುರ ಜಿಲ್ಲೆ ವಿಭಜನೆಯಾಗಿದೆ. ಸಂಸ್ಥೆ ವತಿಯಿಂದ ಬೆಂಗಳೂರಿನ ಹೃದಯ ಭಾಗದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಜಮೀನು ಖರೀದಿಸಲಾಗಿದೆ. ಮುಂಬರುವ ದಿನಗಳಲ್ಲಿ ರಾಜಧಾನಿ ಬೆಂಗಳೂರಿಗೂ ಸಂಸ್ಥೆಯ ಸೇವೆ ವಿಸ್ತರಿಸುವ ಉದ್ದೇಶವಿದೆ. ಭವಿಷ್ಯದಲ್ಲಿ ಸಂಸ್ಥೆಯ ಕಾರ್ಯ ವ್ಯಾಪ್ತಿಯನ್ನು ದೇಶಾದ್ಯಂತ ವಿಸ್ತರಿಸುವ ಸದುದ್ದೇಶದಿಂದ ಈಗ ಇರುವ ಸಂಸ್ಥೆಯ ಟೈಟಲ್ನಲ್ಲಿ ಬಿಜಾಪುರ ಬದಲು ಭಾರತೀಯ ಮತ್ತು ಡಿಸ್ಟ್ರಿಕ್ಟ್ ಬದಲು ಡೆವಲೆಪಮೆಂಟ್ ಶಬ್ದಗಳನ್ನು ಸೇರಿಸಿ ಬದಲಾವಣೆ ಮಾಡಲಾಗುತ್ತಿದೆ. ಇನ್ನು ಮುಂದೆ ಬಿಜಾಪುರ ಲಿಂಗಾಯತ ಡಿಸ್ಟ್ರಿಕ್ಟ್ ಎಜುಕೇಷನ್ ಅಸೋಸಿಯೇಷನ್ ಹೆಸರು ಭಾರತೀಯ ಲಿಂಗಾಯತ ಡೆವಲೆಪ್ಮೆಂಟ್ ಎಜುಕೇಷನ್ ಅಸೋಸಿಯೇಷನ್ ಎಂದು ಬದಲಾಗಲಿದೆ ಎಂದು ಹೇಳಿದರು.
ಸಂಸ್ಥೆಯ ಹೆಸರು ಬದಲಾದರೂ ಅದರ ಮೂಲ ಸಂಪ್ತ ಹೆಸರು ಬಿಎಲ್ಡಿಇ ಅಸೋಸಿಯೇಷನ್ ಯಥಾ ರೀತಿ ಉಳಿಯಲಿದೆ. ಈ ಮೂಲಕ ಸಂಸ್ಥೆಯ ಪ್ರಾತ@ ಸ್ಮರಣೀಯರಾದ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ, ಬಂಥನಾಳ ಶ್ರೀಗಳು, ದಿ. ಬಿ.ಎಂ. ಪಾಟೀಲರು ಹಾಗೂ ಬಂಗಾರಮ್ಮ ಸಜ್ಜನ ಅವರ ದೂರದೃಷ್ಟಿಯ ಸಮಾಜ ಸೇವೆ ಚಿಂತನೆಯನ್ನು ದೇಶಾದ್ಯಂತ ವಿಸ್ತರಿಸಲಾಗುತ್ತಿದೆ ಎಂದರು.
ಸಭೆಗೂ ಮುನ್ನ ಸಂಸ್ಥೆಯ ಮೃತ ಸದಸ್ಯರಾದ ಪ್ರಭು ಬಸವಂತಪ್ಪ ಕುಪ್ಪಿ, ಬಾಲಚಂದ್ರ ಅಪ್ಪಾಸಾಹೇಬ ಪಾಟೀಲ, ಪ್ರಕಾಶ ಶ್ರೀನಿವಾಸ ಶೆಟ್ಟಿ, ಹಣಮಂತ ರಾಮಪ್ಪ ಬಿರಾದಾರ ಮತ್ತು ಸಿದ್ದಪ್ಪ ನಿಂಗಪ್ಪ ಜನವಾಡ ಅವರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಂಸ್ಥೆ ಪ್ರಧಾನ ಕಾರ್ಯದರ್ಶಿ ಜಿ.ಕೆ. ಪಾಟೀಲ, ನಿರ್ದೇಶಕರಾದ ಸುನೀಲಗೌಡ ಪಾಟೀಲ, ಬಸನಗೌಡ ಪಾಟೀಲ, ಅಶೋಕ ವಾರದ, ಸಂಗು ಸಜ್ಜನ, ವಿ.ಎಸ್. ಪಾಟೀಲ ಬಬಲೇಶ್ವರ, ಕುಮಾರ ದೇಸಾಯಿ, ಕೆ.ಕೆ. ಪಾಟೀಲ ತೊರವಿ, ಡಾ. ಎ.ಬಿ. ಪಾಟೀಲ ಲಿಂಗದಳ್ಳಿ, ಆಜೀವ, ಪೋಷಕ ಮತ್ತು ಸರ್ವ ಸದಸ್ಯರು, ಸಂಸ್ಥೆಯ ಹಲವು ಆಡಳಿತಾಧಿಕಾರಿಗಳು ಇದ್ದರು.