

ಹನೂರು: ಪಟ್ಟಣದ ರಾಮಾಪುರ ಹಾಗೂ ಎಲ್ಲೇಮಾಳ ವಿಭಜಕ ರಸ್ತೆಯ ವೃತ್ತಕ್ಕೆ ನಾಡಪ್ರಭು ಕೆಂಪೇಗೌಡ ವೃತ್ತ ಎಂದು ನಾಮಕರಣ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ಧ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಹಾದು ಹೋಗಿರುವ ರಾಮಾಪುರ ಹಾಗೂ ಎಲ್ಲೇಮಾಳ ರಸ್ತೆಯ ವೃತ್ತವನ್ನು ನಾಡಪ್ರಭು ಕೆಂಪೇಗೌಡ ವೃತ್ತ ಎಂದು ನಾಮಕರಣ ಮಾಡಲು 2022ರ ಜುಲೈ 30ರಂದು ನಡೆದ ಪಪಂ ಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಇದೀಗ ಇದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
ತಹಸೀಲ್ದಾರ್ ವೈ.ಕೆ ಗುರುಪ್ರಸಾದ್, ಮುಖ್ಯಾಧಿಕಾರಿ ಮಹೇಶ್‌ಕುಮಾರ್ ಹಾಗೂ ಪಪಂ ಸದಸ್ಯರು ಇದ್ದರು.