

ಹಿರಿಯೂರು: ಮೇಟಿಕುರ್ಕೆ ಬಳಿ ಕೈಗಾರಿಕಾ ವಲಯ ಸ್ಥಾಪಿಸಲು ಅನುಮೋದನೆ ನೀಡಿದ್ದು ಬಿಜೆಪಿ ಸರ್ಕಾರ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ತಿಳಿಸಿದ್ದಾರೆ.
ಈ ವಿಷಯದಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಜಿಲ್ಲಾ ಸಚಿವ ಡಿ.ಸುಧಾಕರ್ ಪತ್ರದ ಮೂಲಕ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ದುರಂತ ಎಂದು ದೂರಿದ್ದಾರೆ.
ಬಿಜೆಪಿ ಸರ್ಕಾರದ ಜನಪರ ಕೆಲಸ, ಅಭಿವೃದ್ಧಿ ಯೋಜನೆ, ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಸಚಿವರು ಬದ್ಧತೆ ಪ್ರದರ್ಶಿಸಬೇಕು ಎಂದು ಒತ್ತಾಯಿಸಿರುವ ಅವರು, ರೈತರ ಭೂಮಿಗೆ ನ್ಯಾಯಯುತ ಪರಿಹಾರಕ್ಕಾಗಿ ಅಂದು ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಎಕರೆಗೆ 25 ಲಕ್ಷ ರೂ. ಪರಿಹಾರ ನಿಗದಿಪಡಿಸಲಾಗಿತ್ತು. ಅದನ್ನು ಕಾರ್ಯರೂಪಕ್ಕೆ ತರಬೇಕು ಎಂದು ಹೇಳಿದ್ದಾರೆ.