'ಅಪ್ಪು' ಆತ್ಮಕಥೆ ಬರೆದ ಅಶ್ವಿನಿ ಪುನೀತ್ ರಾಜ್‍ಕುಮಾರ್.. ಪುಸ್ತಕ ರೂಪದಲ್ಲಿ ಬರ್ತಿದೆ  ಪುನೀತ್ ರಾಜ್‍ಕುಮಾರ್ ಜೀವನ.. Appu Biography Book

appu
Published on

 ಬೆಂಗಳೂರು: ( Appu Biography Book )  ನಟ ಪುನೀತ್ ರಾಜ್‍ಕುಮಾರ್ ಅವರ ಜೀವನ ಚರಿತ್ರೆಯನ್ನು ಆಧರಿಸಿರುವ "ಅಪ್ಪು" ಪುಸ್ತಕವನ್ನು ಅಶ್ವಿನಿ ಪುನೀತ್ ರಾಜ್‍ಕುಮಾರ್ ಮತ್ತು ಪ್ರಕೃತಿ ಬನವಾಸಿ ಅವರು ಬರೆದಿದ್ದಾರೆ.  ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಈ ಸುದ್ದಿಯನ್ನು ಘೋಷಿಸಿದ್ದು, ಅಭಿಮಾನಿಗಳಿಗೆ ಮತ್ತಷ್ಟು ಸಂತೋಷದ ಸಂಗತಿಯಾಗಿದೆ.

‘ಅಪ್ಪು’ ಅನ್ನೋ ಹೆಸರಿನಲ್ಲೇ ಪುನೀತ್ ಬಯೋಗ್ರಫಿ ಬರೆಯಲಾಗಿದೆ. ಅಶ್ವಿನಿ ಮತ್ತು ಪ್ರಕೃತಿ ಬನವಾಸಿ ಒಟ್ಟಾಗಿ ಸೇರಿ ಈ ಪುಸ್ತಕ ಬರೆದಿದ್ದಾರೆ. ಎರಡು ವರ್ಷಗಳ ಪ್ರಯತ್ನದಿಂದ ಈ ಪುಸ್ತಕ ಹೊರ ಬಂದಿದೆ. ಈ ಪುಸ್ತಕದ ಕವರ್ ಪೇಜ್ ಹೇಗಿದೆ ಎಂಬುದನ್ನು ರಿವೀಲ್ ಮಾಡಲಾಗಿದೆ.

ಅಪ್ಪು ಬರ್ತ್​ಡೇ ಸಂದರ್ಭದಲ್ಲಿ ಅಶ್ವಿನಿ ಹಾಗೂ ಮಕ್ಕಳು ಪುಸ್ತಕ ಹಿಡಿದು ಪೋಸ್ ಕೊಟ್ಟಿದ್ದಾರೆ. ಅಪ್ಪು ಕಲರ್​ಫುಲ್ ಜೀವನವನ್ನು ತೆರೆದಿಡುವ ಪುಸ್ತಕಕ್ಕೆ ಬ್ಲ್ಯಾಕ್ ಆ್ಯಂಡ್ ವೈಟ್​ನ ಕವರ್ ಪೇಜ್ ಮಾಡಲಾಗಿದೆ. ಈ ಪುಸ್ತಕದಲ್ಲಿ ಯಾವೆಲ್ಲ ವಿಚಾರಗಳು ಇರಲಿವೆ ಎನ್ನುವ ಕುತೂಹಲ ಮೂಡಿದೆ. ಆಪ್ತರನ್ನು, ಕುಟುಂಬದವರಿಂದ ಮಾಹಿತಿ ಕಲೆ ಹಾಕಿ ಪುಸ್ತಕ ಬರೆಯಲಾಗಿದೆ ಎನ್ನಲಾಗಿದೆ.

ಸದ್ಯದಲ್ಲೇ ಅಧಿಕೃತವಾಗಿ ‘ಅಪ್ಪು’ ಪುಸ್ತಕ ರಿಲೀಸ್ ಮಾಡಲು ಅಶ್ವಿನಿ ಪ್ಲ್ಯಾನ್ ಮಾಡಿದ್ದಾರೆ. ದೊಡ್ಡ ದೊಡ್ಡ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿ ಆಗೋ ಸಾಧ್ಯತೆ ಇದೆಯಂತೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net