ಏ.20ರವರೆಗೆ ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ನೀರು ಹರಿಸಿ, ಸಚಿವ ರಮೇಶ ಜಾರಕಿಹೊಳಿಗೆ ರೈತ ಸಂಘ ಮನವಿ

140320 Hosapete Farmers Association Appeal to Ramesh Jarakiholi
Published on

ಹೊಸಪೇಟೆ: ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ಏ.20ರವರೆಗೆ ನೀರು ಹರಿಸುವಂತೆ ಒತ್ತಾಯಿಸಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ ಬಣ) ಶನಿವಾರ ಮನವಿ ಸಲ್ಲಿಸಿತು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ.ಕಾರ್ತಿಕ್ ಮಾತನಾಡಿ, ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ನೀರು ಹರಿಸಿದರೆ ಭತ್ತ ರೈತರ ಕೈಸೇರಲಿದೆ. ಭದ್ರಾ ಜಲಾಶಯದಲ್ಲಿ 45 ಟಿಎಂಸಿ ನೀರಿದ್ದು, 4 ಟಿಎಂಸಿ ನೀರನ್ನು ತುಂಗಭದ್ರಾ ಜಲಾಶಯಕ್ಕೆ ಹರಿಸಬೇಕು. ಚಿಕ್ಕಜಾಯಿಗನೂರು ನಾರಿಹಳ್ಳದ (ಒಡ್ಡುಗಟ್ಟಿನ ಕೆಳಗಡೆ) ನೂರಾರು ರೈತರಿಗೆ ನೀರು ತಲುಪುತ್ತಿಲ್ಲ. ನಾರಿಹಳ್ಳದ ಪಿಕ್‌ಅಪ್ ಸರಿಪಡಿಸುವ ಜತೆಗೆ ಕಾಲುವೆ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಸಚಿವ ರಮೇಶ ಜಾರಕಿಹೊಳಿ ಮಾತನಾಡಿ, ಅಧಿಕಾರಿಗಳ ಜತೆ ಚರ್ಚಿಸಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಸಂಘದ ಜಿಲ್ಲಾ ಅಧ್ಯಕ್ಷ ನಾರಾಯಣ ರೆಡ್ಡಿ, ಹೊಸಪೇಟೆ ತಾಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ, ಕಂಪ್ಲಿ ತಾಲೂಕು ಅಧ್ಯಕ್ಷ ಕಾಸಿಂ ಸಾಬ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net