ನೆರಿಯ ಗ್ರಾಪಂಗೆ ಆಪ್ತರಕ್ಷಕ ಹಸ್ತಾಂತರ

web hasthantara
Published on

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ಸಹಯೋಗದಲ್ಲಿ ನೆರಿಯ ಗ್ರಾಪಂ ವ್ಯಾಪ್ತಿಗೆ ಕೋವಿಡ್-19 ಆಪ್ತರಕ್ಷಕ ವಾಹನವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಗ್ರಾಪಂ ಅಧ್ಯಕ್ಷೆ ಹಾಗೂ ಪಿಡಿಒಗೆ ಕೀ ನೀಡುವ ಮೂಲಕ ಹಸ್ತಾಂತರಿಸಿದರು.

ನೆರಿಯದ 6 ಆಶಾ ಕಾರ್ಯಕರ್ತೆಯರು, ನರ್ಸ್‌ಗೆ ಗೌರವಿಸಿ ಕಿಟ್ ವಿತರಿಸಲಾಯಿತು. ಬೆಳ್ತಂಗಡಿ ಶಾಸಕರಾಗಿ ಮೂರು ವರ್ಷ ಪೂರೈಸಿದ ಹರೀಶ್ ಪೂಂಜ ಅವರನ್ನು ಗೌರವಿಸಲಾಯಿತು. ನೆರಿಯ ವೈದ್ಯಾಧಿಕಾರಿ ವಾಣಿಶ್ರೀ, ಗ್ರಾಪಂ ಅಧ್ಯಕ್ಷೆ ವಸಂತಿ, ಪಿಡಿಒ ಗಾಯತ್ರಿ ಅವರನ್ನು ಸನ್ಮಾನಿಸಲಾಯಿತು.

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್, ರಾಜೇಶ್ ಪೈ, ನೆರಿಯ ಚರ್ಚ್ ಧರ್ಮಗುರು ಶಾಜು ಮ್ಯಾಥು, ನೆರಿಯ ಗ್ರಾಪಂ ಉಪಾಧ್ಯಕ್ಷೆ ಕುಶಾಲ, ನಿಯೋಜಿತ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಶರತ್ ಕೃಷ್ಣ ಪಡ್ವೇಟ್ನಾಯ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಧನಂಜಯ್ ರಾವ್, ರೋಟರಿ ಕ್ಲಬ್ ಕಾರ್ಯದರ್ಶಿ ಶ್ರೀಧರ್ ಕೆ.ವಿ., ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಶಿಧರ್ ಎಂ. ಕಲ್ಮಂಜ, ನಿಯೋಜಿತ ರೋಟರಿ ಕ್ಲಬ್ ಕಾರ್ಯದರ್ಶಿ ಅಬೂಬಕ್ಕರ್, ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ತಾಲೂಕು ವೈದ್ಯಾಧಿಕಾರಿ ಕಲಾಮಧು, ಶ್ರೀಧರ್ ಮರಕಡ ಮತ್ತು ನೆರಿಯ ಗ್ರಾಪಂ ಸಿಬ್ಬಂದಿ ಹಾಗೂ ಸದಸ್ಯರು ಭಾಗವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net