ಕುಡಿಯುವ ನೀರು ಪೂರೈಸಲು ಒತ್ತಾಯ

15062021 Arakera womens protest
Published on

ಅರಕೇರಾ: ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಗ್ರಾಪಂ ಕಚೇರಿ ಎದುರು 7ನೇ ವಾರ್ಡ್‌ನ ದಲಿತ ಕಾಲನಿಯ ಮಹಿಳೆಯರು ಖಾಲಿಕೊಡಗಳೊಂದಿಗೆ ಮಂಗಳವಾರ ಪ್ರತಿಭಟನೆ ನಡೆಸಿದರು.

4-5 ದಿನಗಳಿಂದ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಇದರಿಂದಾಗಿ ತೀವ್ರ ತೊಂದರೆಯಾಗಿದೆ. ಹಲವಾರು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ದೂರಿದರು. ಕೂಡಲೇ ಸಮಸ್ಯೆ ಪರಿಹರಿಸಬೇಕು ಇಲ್ಲದಿದ್ದರೆ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಮೌಖಿಕವಾಗಿ ಎಚ್ಚರಿಕೆ ನೀಡಿ, ತೆರಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net