ಪುರಾತನ ಕಾಲದ ಪರಿಸ್ಥಿತಿ ನಿರ್ಮಾಣ; ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜಶೇಖರ ನಾಯಕ ಹೇಳಿಕೆ

06092022 Arakera news
Published on

ಎತ್ತುಗಳಿಂದ ಭಾರ ಎಳೆಯುವ ಸ್ಪರ್ಧೆ

ಅರಕೇರಾ: ಕಾಲಕ್ಕೆ ತಕ್ಕಂತೆ ಬದಲಾಗುವುದು ಪ್ರಕೃತಿ ಸ್ವಭಾವ. ಪ್ರಕೃತಿಯನ್ನು ಅಳಿವಿನಂಚಿಗೆ ಕೊಂಡೊಯ್ಯಲಾಗುತ್ತಿದೆ. ಪರಿಸರವನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿರುವುದು ವಿಷಾದನೀಯ ಎಂದು ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎ.ರಾಜಶೇಖರ ನಾಯಕ ಹೇಳಿದರು.

ಭೂಮನಗುಂಡ ಗ್ರಾಮದಲ್ಲಿ ಶ್ರೀ ಮಲ್ಲಣ್ಣ ತಾತನವರ ಜಾತ್ರೆಯ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಎತ್ತುಗಳಿಂದ ಭಾರ ಎಳೆಯುವ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಮನುಷ್ಯ ಪುರಾತನ ಕಾಲಕ್ಕೆ ಪ್ರವೇಶ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಎತ್ತು ಹಾಗೂ ಗೋವುಗಳನ್ನು ದೇವರ ರೂಪದಲ್ಲಿ ಕಾಣುತ್ತೇವೆ. ಅವುಗಳನ್ನು ರೈತಾಪಿ ವರ್ಗ ಸಂರಕ್ಷಿಸಿಕೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net