ಸಂಪುಟ ರಚನೆ ವಿಚಾರ ಸಿಎಂ ವಿವೇಚನೆಗೆ ಬಿಟ್ಟ ವಿಚಾರ

16102022 devadurga r ashok minister
Published on

ಅರಕೇರಾ: ಸಚಿವ ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರವಾಗಿದ್ದು, ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವುದನ್ನು ಕೇಂದ್ರದ ನಾಯಕರು ಮತ್ತು ಸಿಎಂ ನಿರ್ಧರಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.

ಸ್ಥಳೀಯ ಶಾಸಕ ಕೆ.ಶಿವನಗೌಡ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿ, ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡಬೇಕು ಎನ್ನುವ ಬಗ್ಗೆ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಗ್ರಾಮ ವಾಸ್ತವ್ಯಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜನರು ಪ್ರೀತಿ, ವಿಶ್ವಾಸವನ್ನು ತೋರಿಸಿದ್ದಾರೆ. ಅರಕೇರಾದಲ್ಲಿ ಜನರು ತೋರಿಸಿದ ಪ್ರೀತಿ ಸದಾ ಜ್ಞಾಪಕದಲ್ಲಿ ಉಳಿಯುತ್ತದೆ. ಗ್ರಾಮ ವಾಸ್ತವ್ಯದಲ್ಲಿ ನ್ಯಾಯ ಸಿಗುತ್ತದೆ ಎಂದು ಜನರು ಬರುತ್ತಿದ್ದಾರೆ. ಅರಕೇರಾಗೆ ಯಾದಗಿರಿ, ಕುಷ್ಟಗಿಯಿಂದ ಆಗಮಿಸಿ ಜನರು ಅಹವಾಲು ಸಲ್ಲಿಸಿದ್ದಾರೆ.
ಗ್ರಾಮ ವಾಸ್ತವ್ಯದಲ್ಲಿ 17 ಸಾವಿರ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲಾಗಿದೆ. ಸೈನಿಕರಿಗೆ ನಿವೇಶನಕ್ಕಾಗಿ 6 ಎಕರೆ ಭೂಮಿ ಮಂಜೂರು ಮಾಡಲಾಗಿದೆ. ಜನರು ಮನೆಗಳಿಗಾಗಿ ಬೇಡಿಕೆಯಿಡುತ್ತಿದ್ದು, ಸಚಿವ ಸೋಮಣ್ಣ ಹೇಳಿದ ತಕ್ಷಣ ಅರಕೇರಾಗೆ 300 ಮನೆಗಳನ್ನು ಮಂಜೂರು ಮಾಡಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net