ಸಂಧ್ಯಾಕಾಲದ ಬದುಕಿಗೆ ಎನ್‌ಪಿಎಸ್ ಮಾರಕ

191222 Aarakera NPS Protest
ಅರಕೇರಾದಲ್ಲಿ ಶಾಸಕ ಕೆ.ಶಿವನಗೌಡ ನಾಯಕಗೆ ಎನ್‌ಪಿಎಸ್ ನೌಕರರ ಸಂಘದ ತಾಲೂಕು ಪದಾಧಿಕಾರಿಗಳು ಭಾನುವಾರ ಮನವಿ ಸಲ್ಲಿಸಿದರು.
Published on

ಅರಕೇರಾ: ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಜಾರಿಗೊಳಿಸಲು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯಬೇಕೆಂದು ಆಗ್ರಹಿಸಿ ಶಾಸಕ ಕೆ.ಶಿವನಗೌಡ ನಾಯಕಗೆ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ದೇವದುರ್ಗ ತಾಲೂಕು ಘಟಕದ ಪದಾಧಿಕಾರಿಗಳು ಭಾನುವಾರ ಮನವಿ ಸಲ್ಲಿಸಿದರು.

2006 ರ ಏಪ್ರಿಲ್ ನಂತರ ಸರ್ಕಾರಿ ಸೇವೆಗೆ ಸೇರಿರುವ ಎಲ್ಲ ನೌಕರರಿಗೂ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಿದ್ದು, ಈ ಯೋಜನೆ ನೌಕರರ ಸಂಧ್ಯಾಕಾಲದ ಬದುಕಿಗೆ ಮಾರಕವಾಗಿದೆ. 30 ರಿಂದ 35 ವರ್ಷ ಸರ್ಕಾರಿ ಸೇವೆ ಸಲ್ಲಿಸುವ ನೌಕರರು ತಿಂಗಳಿಗೆ ಸಾವಿರದಿಂದ ಎರಡು ಸಾವಿರ ಪಿಂಚಣಿಯನ್ನು ಪಡೆಯಬೇಕಾಗುತ್ತದೆ. ಷೇರು ಮಾರುಕಟ್ಟೆ ಆಧಾರಿತ ಯೋಜನೆ ನೌಕರರ ನೆಮ್ಮದಿ ಹಾಳು ಮಾಡಿದೆ ಎಂದು ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net