ಚರಂಡಿ ಹೂಳೆತ್ತಲು ಗ್ರಾಪಂಗೆ ಸೂಚನೆ

ARASIKERE TASKFORCE
ಅರಸೀಕೆರೆ ಗ್ರಾಮ ಪಂಚಾಯಿತಿಯಲ್ಲಿ ಕರೆದಿದ್ದ ಟಾಸ್ಕ್‌ಪೋರ್ಸ್ ಸಭೆಯಲ್ಲಿ ಉಪ ತಹಸೀಲ್ದಾರ್ ಫಾತಿಮಾ ಬೀ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ವಿ. ವಿಜಯಲಕ್ಷ್ಮಿ, ಕಂದಾಯ ನಿರೀಕ್ಷಕ ಶ್ರೀಧರ ಇತರರು ಇದ್ದರು.
Published on


ಅರಸೀಕೆರೆ: ಗ್ರಾಮದ ಚರಂಡಿಗಳಲ್ಲಿ ಹೂಳು ತುಂಬಿ ದುರ್ವಾಸನೆ ಬೀರುತ್ತಿದ್ದು, ಕೂಡಲೇ ತ್ಯಾಜ್ಯ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಉಪ ತಹಸೀಲ್ದಾರ್ ಫಾತಿಮಾ ಬೀ ಗ್ರಾಪಂ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಗ್ರಾಪಂ ಕಚೇರಿಯಲ್ಲಿ ಆಯೋಜಿಸಿದ್ದ ಟಾಸ್ಕ್‌ಪೋರ್ಸ್ ಸಭೆಯಲ್ಲಿ ಮಾತನಾಡಿದರು.

ಬಡವರಿಗೆ ಆಹಾರ ಧಾನ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ. ಪ್ರತಿಯೊಬ್ಬರೂ ಮುಖಕ್ಕೆ ಮಾಸ್ಕ್ ಧರಿಸಿ ಕರೊನಾ ಸೋಂಕಿನಿಂದ ರಕ್ಷಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಂದಾಯ ನಿರೀಕ್ಷಕ ಶ್ರೀಧರ, ಡಾ. ಭುವನೇಶ್ವರ್, ಗ್ರಾಪಂ ಅಧ್ಯಕ್ಷೆ ವಿ. ವಿಜಯಲಕ್ಷ್ಮಿ, ಪಿಡಿಒ ಹಾಲೇಶ್, ಪರಶುರಾಮ, ಆಶಾ ಕಾರ್ಯಕರ್ತೆಯರು ಇದ್ದರು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net