ಸಂವಿಧಾನದ ಆಶಯಗಳಿಗೆ ಧಕ್ಕೆ ಬಾರದಿರಲಿ

26arsph2ep
Published on

ಅರಸೀಕೆರೆ: ಭಾರತೀಯ ಸಂವಿಧಾನದ ಆಶಯಗಳಿಗೆ ಧಕ್ಕೆ ಬಾರದಂತೆ ನಡೆದುಕೊಳ್ಳುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್ ಹೇಳಿದರು. ನಗರದ ಜೇನುಕಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸ್ವಾತಂತ್ರ್ಯ, ಸಮಾನತೆ, ಸಹೋದರೆತೆಯ ತತ್ವದ ಆಧಾರ ಮೇಲೆ ಮಹನೀಯರು ಸಂವಿಧಾನವನ್ನು ರಚಿಸಿ ನಾಡಿಗೆ ಸಮರ್ಪಿಸಿದ್ದು ಎಲ್ಲರ ಆಶೋತ್ತರಗಳನ್ನು ಈಡೇರಿಸುವತ್ತ ಮಹತ್ವ ಪಡೆದು ಕೊಂಡಿದೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎನ್ನುವ ಧ್ಯೇಯವನ್ನು ಅಳವಡಿಸಿಕೊಂಡು ನಾವು ಮುನ್ನಡೆಯೋಣ ಎಂದು ಕರೆ ನೀಡಿದರು.
ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಸಾರ್ವಭೌಮ, ಜಾತ್ಯತೀತ ಹಾಗೂ ಪ್ರಜಾಸತ್ತಾತ್ಮಕ ಗಣರಾಜ್ಯದ ಕಲ್ಪನೆಗೆ ಅನುಗುಣವಾಗಿ ನಡೆದುಕೊಂಡಾಗ ಮಾತ್ರವೇ ಗಣತಂತ್ರ ರಾಷ್ಟ್ರ ಎನ್ನುವ ಹೆಸರಿಗೆ ಮಹತ್ವ ಬರಲಿದೆ ಎಂದರು. ಪೌರಾಯುಕ್ತ ಕೃಷ್ಣಮೂರ್ತಿ, ತಾ.ಪಂ.ಇ ನಾಗರಾಜ್, ಡಿವೈಎಸ್‌ಪಿ ಲೋಕೇಶ್, ಬಿಇಒ ಮೋಹನ್‌ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಇದ್ದರು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸಕೃತಿಕ ಕಾರ್ಯಕ್ರಮಗಳು ರಂಜಿಸಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net