

ರಸ್ತೆ ವಿಸ್ತರಣೆ ಹಿನ್ನೆಲೆ
ಅರಸೀಕೆರೆ: (ಹರಪನಹಳ್ಳಿ ತಾಲೂಕು) ಗ್ರಾಮದ ಬಸ್ ನಿಲ್ದಾಣ ಸಮೀಪದ ಚಿಕ್ಕಕೆರೆ ಜಾಗದಲ್ಲಿ ತೆರೆದಿರುವ ಅನಧಿಕೃತ ಅಂಗಡಿ, ಶೆಡ್‌ಗಳನ್ನು ಗ್ರಾಮಾಡಳಿತ ಪೊಲೀಸ್ ಬಂದೋಬಸ್ತ್‌ನಲ್ಲಿ ಸೋಮವಾರ ತೆರವುಗೊಳಿಸಿತು.
ಪಿಡಿಒ ಅಂಜಿನಪ್ಪ ಮಾತನಾಡಿ, ರಸ್ತೆ ವಿಸ್ತರಣೆ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸುವಂತೆ ವಿಜಯನಗರ ಜಿಲ್ಲಾಧಿಕಾರಿ ಹಾಗೂ ಶಾಸಕರು ಆದೇಶಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪಿಎಸ್‌ಐ ನಾಗರತ್ನ, ಗ್ರಾಪಂ ಅಧ್ಯಕ್ಷರು, ಸರ್ವ ಸದಸ್ಯರು ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.
ಅರಸೀಕೆರೆ ನೂತನ ಬಸ್ ನಿಲ್ದಾಣ, ರಸ್ತೆ ವಿಸ್ತರಣೆ, ಚಿಕ್ಕಕೆರೆ ಶುಚಿತ್ವ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸರ್ಕಾರದಿಂದ ಸಾಕಷ್ಟು ಅನುದಾನ ತಂದಿದ್ದೇನೆ. ಅಗತ್ಯ ಕಾಮಗಾರಿ ಕೈಗೊಳ್ಳಲಿಕ್ಕಾಗಿ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಗಿದೆ.| ಎಸ್.ವಿ. ರಾಮಚಂದ್ರಪ್ಪ, ಶಾಸಕ ಹಾಗೂ ವಾಲ್ಮೀಕಿ ನಿಗಮದ ಅಧ್ಯಕ್ಷ