ತಿಮ್ಮಲಾಪುರ ಗ್ರಾಮದಲ್ಲಿ ಸಿದ್ಧಗಂಗಾ ಶ್ರೀಗಳ ಪುಣ್ಯ ಸ್ಮರಣೆ

210122 Arasikere Siddaganga Punyasmarane
ಅರಸೀಕೆರೆಯ ತಿಮ್ಮಲಾಪುರ ಗ್ರಾಮದಲ್ಲಿ ಸಿದ್ಧಗಂಗಾಶ್ರೀ ಲಿಂ. ಡಾ.ಶಿವಕುಮಾರ ಮಹಾಸ್ವಾಮಿಗಳ 3ನೇ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.
Published on

ಅರಸೀಕೆರೆ: ತಿಮ್ಮಲಾಪುರ ಗ್ರಾಮದಲ್ಲಿ ಸಿದ್ಧಗಂಗಾಶ್ರೀ ಲಿಂ. ಡಾ.ಶಿವಕುಮಾರ ಮಹಾಸ್ವಾಮಿಗಳ 3ನೇ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.

ಕೋಲಶಾಂತೇಶ್ವರ ಮಠದ ಶ್ರೀ ಶಾಂತಲಿಂಗ ದೇಶಿಕೇಂದ್ರ ಮಹಾಸ್ವಾಮೀಜಿ ಮಾತನಾಡಿ, ಡಾ.ಶಿವಕುಮಾರ ಮಹಾಸ್ವಾಮಿಗಳು ಶಿಕ್ಷಣ, ಧಾರ್ಮಿಕ ಕ್ಷೇತ್ರಗಳಲ್ಲಿ ಅಪಾರ ಸಾಧನೆ ಮಾಡಿದವರು. ತ್ರಿವಿಧ ದಾಸೋಹಿಗಳು. ಇವರ ಪುಣ್ಯ ಸ್ಮರಣೆ ದಿನವಾದ ಜ.21ರಂದು ‘ದಾಸೋಹ ದಿನ’ ಎಂದು ಸರ್ಕಾರ ಘೋಷಣೆ ಮಾಡಿದ್ದು ಹೆಮ್ಮೆಯ ವಿಷಯ. ಎಲ್ಲರೂ ಅವರ ಸ್ಮರಣೆಯನ್ನು ಶ್ರದ್ಧೆ, ಭಕ್ತಿ, ಶ್ರದ್ದೆ, ವಿಶ್ವಾಸದಿಂದ ನೆರವೇರುಸುತ್ತಿರುವುದು ಸಂತಸದ ವಿಷಯ ಎಂದರು.

ನಂತರ ಊರಿನ ಪ್ರಮುಖ ಬೀದಿಗಳಲ್ಲಿ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಭಾವಚಿತ್ರ ಮೆರವಣಿಗೆ ನಡೆಯಿತು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ತೌಡೂರಿನ ಗುರುಮೂರ್ತಯ್ಯ ಸ್ವಾಮೀಜಿ, ಊರಿನ ಮುಖಂಡರು, ಭಜನಾ ಸಂಘದವರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net