ದೇವನಹಳ್ಳಿಯಲ್ಲಿ ಅರಸು ಜನ್ಮದಿನಾಚರಣೆ

arasu jayanti
ದೇವನಹಳ್ಳಿ ಡಿಸಿ ಕಚೇರಿಯಲ್ಲಿ ದೇವರಾಜು ಅರಸು ಜನ್ಮದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಡಿಸಿ ಡಾ.ಎನ್.ಶಿವಶಂಕರ ಮಾತನಾಡಿದರು. ಸಿಇಒ ಡಾ.ಕೆ.ಎನ್.ಅನುರಾಧಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ನಿರುಪಮಾ ಇದ್ದರು.
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು 109ನೇ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಆ.20 ರಂದು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಿ.ದೇವರಾಜ ಅರಸು ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ದೇವನಹಳ್ಳಿ ಟೌನ್‌ನಲ್ಲಿರುವ ದೇವರಾಜು ಅರಸು ಭವನದಲ್ಲಿ ಜನ್ಮದಿನಾಚರಣೆ ಆಚರಿಸಲಾಗುವುದು ಇದಕ್ಕೆ ಸಂಬಂಧಪಟ್ಟಂತೆ ಎಲ್ಲ ಅಧಿಕಾರಿಗಳು ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದರು. ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಿಸಿ ಎಲ್ಲ ಗಣ್ಯರನ್ನು ಆಹ್ವಾನಿಸಬೇಕು, ಕಾರ್ಯಕ್ರಮದ ವೇದಿಕೆ ಅಚ್ಚುಕಟ್ಟಾಗಿ ನಿರ್ಮಿಸಿ, ವಿಶೇಷ ಉಪನ್ಯಾಸ ನೀಡಲು ಪರಿಣಿತರನ್ನು ಕರೆಸಿ, ಕಲಾ ತಂಡಗಳಿಗೆ ಆಹ್ವಾನ ನೀಡಬೇಕು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು, ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು, ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸೇರಿ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಕಾರ್ಯಕ್ರಮ ಅರ್ಥ ಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net