ಹುಟ್ಟೂರಿನಲ್ಲಿ ಅರಸು ಜಯಂತಿ ಆಚರಣೆ

20BTP01
Published on

ಬೆಟ್ಟದಪುರ: ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಹುಟ್ಟೂರಾದ ಬೆಟ್ಟದಪುರ ಸಮೀಪದ ಬೆಟ್ಟದತುಂಗ ಗ್ರಾಮದಲ್ಲಿ ಬುಧವಾರ ಅರಸು ಅವರ ಜನ್ಮದಿನಾಚರಣೆ ನೆರವೇರಿತು. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಗ್ರಾಮ ಪಂಚಾಯತಿ ವತಿಯಿಂದ ಪಂಚಾಯಿತಿ ಆವರಣದಲ್ಲಿರುವ ಅರಸು ಪ್ರತಿಮೆಗೆ ಈ ಸಂದರ್ಭ ಮಾಲಾರ್ಪಣೆ ಮಾಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೀತಿ ಮಾತನಾಡಿ, ರಾಜ್ಯದಲ್ಲಿ ಭೂ ಒಡೆತನ, ಮೀಸಲು ಸೌಲಭ್ಯ ಕಲ್ಪಿಸಿಕೊಟ್ಟು, ಶೋಷಿತ ಸಮುದಾಯಗಳಿಗೆ ಬಲ ತಂದುಕೊಟ್ಟ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ ಎಂದರು. ಉಳುವವನೆ ಭೂಮಿಯ ಒಡೆಯ ಕಾಯ್ದೆ ರಾಜ್ಯದ ಹಲವು ಜನರಿಗೆ ಭೂ ಒಡೆತನದ ಹಕ್ಕು ನೀಡಿತು. ನಿರುದ್ಯೋಗಿಗಳಿಗೆ ಸಹಾಯಧನದಂತಹ ಕಾರ್ಯಕ್ರಮಗಳನ್ನು ರೂಪಿಸಿ ಸಾವಿರಾರು ಯುವಜನರಿಗೆ ಅವರು ನೆರವಾದರು. ಜೀತ ಪದ್ಧತಿ ನಿರ್ಮೂಲನೆ ಮಾಡಿದರು. ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದರು ಎಂದರು.

ತಹಸೀಲ್ದಾರ್ ನಿಸರ್ಗ ಪ್ರಿಯ, ಹಿಂದುಳಿದ ವರ್ಗಗಳ ತಾಲೂಕು ಕಲ್ಯಾಣಾಧಿಕಾರಿ ಕೃಷ್ಣೆಗೌಡ, ಪಿಡಿಒ ಚೇತನ್, ಮುಖಂಡರಾದ ರಾಜೇಅರಸ್, ಕೃಷ್ಣಅರಸ್, ವಿನಯ್, ಕರಿಯಯ್ಯ, ಗಣೇಶ, ಸುಮತಿ, ಅಣ್ಣಯ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net