ಯಾದಗಿರಿ : 2024-25ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳ ಸೌಲಭ್ಯವನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕಿ ಟಿ.ಪ್ರಿಯದರ್ಶಿನಿ ಅವರು ತಿಳಿಸಿದ್ದಾರೆ.
ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳು ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು, ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.
ಒAದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿಸಲ್ಲಿಸಲು ಅರ್ಹರಿರುವುದಿಲ್ಲ.
2023-24ನೇ ಸಾಲಿನ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.ಸೇವಾಸಿಂಧು ಪೋರ್ಟಲ್ sevasindhu.karnataka.gov.in ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ 2024ರ ಆಗಸ್ಟ್ 31ರ ಒಳಗೆ ಅರ್ಜಿಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.dbcdc.karnataka.gov.in ನಲ್ಲಿ ಮಾಹಿತಿ ಪಡೆಯಬಹುದು ಅಥವಾ ನಿಗಮದ ಸಹಾಯವಾಣಿ ಸಂ.080 22374832, 8050770004, 8050770005, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಮಿನಿ ವಿಧಾನಸೌಧ 2ನೇ ಮಹಡಿ ಸಿ-ಬ್ಲಾಕ್ ರೂ.ನಂ.14 ಚಿತ್ತಾಪೂರ ರಸ್ತೆ ಯಾದಗಿರಿ ದೂ.ಸಂ.08473 253746 ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ