ಪರಿಸರದಲ್ಲಿ ಏರುಪೇರು ಆತಂಕಕಾರಿ ಬೆಳವಣಿಗೆ

arathi
Published on

ಕುಶಾಲನಗರ:

ನಾಗಾಲೋಟದ ಅಭಿವೃದ್ಧಿಯ ನಡುವೆ ಪರಿಸರದಲ್ಲಿ ಏರುಪೇರು ಆಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಕಾವೇರಿ ನದಿ ಸ್ವಚ್ಛತಾ ಆಂದೋಲನ ಮತ್ತು ಅಖಿಲ ಭಾರತೀಯ ಸನ್ಯಾಸಿ ಸಂಘ ಆಶ್ರಯದಲ್ಲಿ ಕುಶಾಲನಗರದಲ್ಲಿ ಶುಕ್ರವಾರ ಸಂಜೆ ನಡೆದ ಸ್ವಚ್ಛ ಕಾವೇರಿಗಾಗಿ 15ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ಮತ್ತು 178ನೆಯ ವಿಶೇಷ ಮಹಾ ಆರತಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

ವ್ಯಾಪಾರ ವಹಿವಾಟು ಮಾಡುವ ಕಾಯಕದ ಸಂದರ್ಭ ಪರಿಸರಕ್ಕೆ ಯಾವುದೇ ರೀತಿಯ ಹಾನಿ ಉಂಟಾಗದAತೆ ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕಾಗಿದೆ. ನೆಮ್ಮದಿ ಮತ್ತು ಆರೋಗ್ಯಕರ ಬದುಕಿಗೆ ನೀರಿನ ಅವಲಂಬನೆಯ ಅಗತ್ಯತೆ ಇದ್ದು ಯಾವುದೇ ಸಂದರ್ಭ ಜಲಮೂಲಗಳು ನಾಶವಾಗದಂತೆ ನೋಡಿಕೊಳ್ಳಬೇಕು.

ಯೋಜನೆಗಳು, ಅಭಿವೃದ್ಧಿ ವೈಜ್ಞಾನಿಕವಾಗಿ ನಡೆಯುವ ಮೂಲಕ ಪರಿಸರ ಜಾಗೃತಿ ಅಗತ್ಯ. ಮುಂದಿನ ಜನಾಂಗಕ್ಕೆ ಉತ್ತಮ ಪರಿಸರವನ್ನು ಹಸ್ತಾಂತರ ಮಾಡುವ ಕೆಲಸ ಎಲ್ಲರದ್ದಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ ಅಭಿವೃದ್ಧಿಯ ನಡುವೆ ಪ್ರಕೃತಿಯ ಬಗ್ಗೆ ಕಾಳಜಿ ಮರೆಯುವಂತಿಲ್ಲ. ನದಿಗಳೊಂದಿಗೆ ಭಾವನಾತ್ಮಕ ಸಂಬAಧ ಹೊಂದುವAತಾಗಬೇಕು. ಬದುಕಿಗೆ ಆಶ್ರಯ, ಆಧಾರವಾಗಿರುವ ನದಿಗಳನ್ನು ಆರಾಧಿಸುವ ಮೂಲಕ ಸಂರಕ್ಷಣೆ ಸಾಧ್ಯ. ನದಿ ದಂಡೆಗಳಲ್ಲಿ ನಾಗರೀಕತೆ ಉದಯವಾಗಿದ್ದು ಯಾವುದೇ ಸಂದರ್ಭ ನದಿ ಜಲಮೂಲಗಳಿಗೆ ಹಾನಿಯಾಗದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.

ಅಖಿಲ ಭಾರತೀಯ ಸನ್ಯಾಸಿ ಸಂಘದ ಪ್ರಮುಖರಾದ ಸ್ವಾಮಿ ಶಿವರಾಮನಂದ ಮಾತನಾಡಿ ಕಳೆದ 15 ವರ್ಷಗಳ ಕಾಲದಿಂದ ನಿರಂತರವಾಗಿ ಭಾರತದ ನದಿಗಳ ಸಂರಕ್ಷಣೆ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ನಡೆಯುತ್ತಿದೆ. ಕಾವೇರಿ ನದಿ ಸಂರಕ್ಷಣೆಗಾಗಿ ಕಳೆದ 15 ವರ್ಷಗಳಿಂದ ತಲಕಾವೇರಿಯಿಂದ ಕಾವೇರಿ ಜಾಗೃತಿ ರಥಯಾತ್ರೆ ನಡೆಯುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕುಶಾಲನಗರ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕಿ ಲೀಲಾವತಿ, ಪಾರಂಪರಿಕ ವೈದ್ಯರಾದ ಸುಮನ ಮಳಲಗದ್ದೆ, ಸ್ವಚ್ಛತಾ ಆಂದೋಲನ ಹಾಸನ ಜಿಲ್ಲಾ ಸಂಚಾಲಕ ಎಂ. ಎನ್. ಕುಮಾರಸ್ವಾಮಿ, ಕುಶಾಲನಗರ ಕೊಡವ ಸಮಾಜದ ಅಧ್ಯಕ್ಷ ವಾಂಚೀರ ಮನು ನಂಜುAಡ, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿ ಪ್ರಸಾದ್, ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್, ಶ್ರೀ ಗಣಪತಿ ದೇವಾಲಯ ಪ್ರಧಾನ ಅರ್ಚಕ ಆರ್.ಕೆ. ನಾಗೇಂದ್ರ ಬಾಬು, ಮಹಿಳಾ ಭಜನಾ ಮಂಡಳಿಯ ಪ್ರಮುಖರಾದ ಪದ್ಮ ಪುರುಷೋತ್ತಮ್ ಯಾತ್ರೆಗೆ ಶುಭ ಹಾರೈಸಿದರು.

ಇದೇ ಸಂದರ್ಭ ಕುಶಾಲನಗರ ಭಜನಾ ಮಂಡಳಿ ಸದಸ್ಯರಿಂದ ಕುಂಕುಮಾರ್ಚನೆ, ಸಹಸ್ರ ಲಲಿತ ನಾಮ ಸಂಕೀರ್ತನೆ ನಡೆಯಿತು.

ಅರ್ಚಕ ಕೃಷ್ಣಮೂರ್ತಿ ಭಟ್ ನೇತೃತ್ವದಲ್ಲಿ ಕಾವೇರಿಗೆ 178ನೆಯ ವಿಶೇಷ ಮಹಾ ಆರತಿ ಕಾರ್ಯಕ್ರಮ ಮತ್ತು ಕಾವೇರಿ ಮೂರ್ತಿಗೆ ಅಷ್ಟಾಭಿಷೇಕ ನಡೆಯಿತು.

ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಡೆಪAಡ ಬೋಸ್ ಮೊಣ್ಣಪ್ಪ, ನಮಾಮಿ ಕಾವೇರಿ ಜಿಲ್ಲಾ ಅಧ್ಯಕ್ಷೆ ವನಿತಾ ಚಂದ್ರಮೋಹನ್, ಆರತಿ ಬಳಗದ ಪ್ರಮುಖರಾದ ಧರಣಿ ಸೋಮಯ್ಯ, ಚೈತನ್ಯ ಸಿ ಮೋಹನ್, ಬಿ ಜೆ ಅಣ್ಣಯ್ಯ, ಕೊಡಗನ ಹರ್ಷ, ಪುರಸಭೆ ಸದಸ್ಯರಾದ ಡಿ.ಕೆ. ತಿಮ್ಮಪ್ಪ, ವಿ.ಎಸ್. ಆನಂದಕುಮಾರ್, ಮಾಜಿ ಸೈನಿಕರ ಸಂಘದ ಎಳ್ತಂಡ ರಂಜಿತ್, ಅಖಿಲ ಭಾರತ ಸನ್ಯಾಸಿ ಸಂಘದ ಪ್ರಮುಖರು, ಮಹಿಳಾ ಭಜನಾ ಮಂಡಳಿ ಮತ್ತು ಕಾವೇರಿ ಆರತಿ ಬಳಗ ಸದಸ್ಯರು ಈ ಸಂದರ್ಭ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net