

ಹುಬ್ಬಳ್ಳಿ: ಸ್ಟೈಫಂಡ್ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಇಲ್ಲಿಯ ಕಿಮ್ಸ್ ಆವರಣದಲ್ಲಿ ಕಿರಿಯ ವೈದ್ಯರು ನಡೆಸಿರುವ ಮುಷ್ಕರವು ಭಾನುವಾರವೂ ಮುಂದುವರಿದಿದೆ.
ರಾಜ್ಯ ಸರ್ಕಾರವು ನ್ಯಾಯಯುತವಾಗಿ ನಮ್ಮ ಬೇಡಿಕೆ ಈಡೇರಿಸಬೇಕೆಂದು ಪ್ರತಿಭಟನಾ ನಿರತರು ಘೋಷಣೆ ಕೂಗಿ ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಅವರು ಹಲವು ಬೇಡಿಕೆಯುಳ್ಳ ಮನವಿ ಸ್ವೀಕರಿಸಿ ಮಾತನಾಡಿ, ನಿಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಗಮನ ಸೆಳೆದು ಈಡೇರಿಸುವಂತೆ ಒತ್ತಡ ಹಾಕಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ಕೋಲ್ಕತ್ತದ ಟ್ರೈನಿ ವೈದ್ಯೆ ಮೇಲಿನ ಹತ್ಯಾಚಾರ ಖಂಡಿಸಿ, ಹಂತಕನಿಗೆ ಕಠಿಣ ಶಿಕ್ಷೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.
ಸಂಘದ ಅಧ್ಯಕ್ಷ ಡಾ. ಸುಹಾಸ ಎಸ್.ಟಿ., ರಾಜ್ಯ ಸಂಚಾಲಕ ಡಾ. ಆದರ್ಶ ಇ.ಎಚ್., ಪ್ರಧಾನ ಕಾರ್ಯದರ್ಶಿ ಡಾ. ಆದರ್ಶಾ ವಿ., ಉಪಾಧ್ಯಕ್ಷೆ ಡಾ. ಹರ್ಷಿತಾ, ಡಾ. ದೀಕ್ಷಂತ್, ಡಾ. ಸುನಿಲ್ ಆರ್., ಡಾ. ರಕ್ಷಿತ್ ಎಂ.ಸಿ., ಡಾ. ಉಷಾ ಎಸ್.ವಿ., ಡಾ. ಯತೀಶ ಕೆ.ಪಿ., ಡಾ. ಸುನಿಲ್ ಆರ್., ಡಾ. ಆಶಾ ಎ.ಎಂ., ಡಾ. ಅಭಿಜಿತ್ ಬಾಪೂರಾಂ ಇದ್ದರು.