ಭಾಷೆಯಿಂದ ಪ್ರೀತಿಯ ಬಂಧ ದ್ವಿಗುಣ : ಸಾಹಿತಿ ಶೈಲಜಾ ದಿನೇಶ್ ಅನಿಸಿಕೆ

New Project (24)
Published on

ಸುಳ್ಯ: ಭಾಷೆ ಮನುಷ್ಯರ ನಡುವೆ ಸಂಬಂಧಗಳನ್ನು ಬೆಸೆಯುತ್ತದೆಯಲ್ಲದೆ ಪ್ರೀತಿಯ ಬಂಧವನ್ನು ದ್ವಿಗುಣಗೊಳಿಸುತ್ತದೆ ಎಂದು ಸುಳ್ಯ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಸಾಹಿತಿ ಶೈಲಜಾ ದಿನೇಶ್ ಹೇಳಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸ್ಥಾಪನಾ ದಿನದ ಅಂಗವಾಗಿ ಕರ್ನಾಟಕ ಅರೆಭಾಷೆ ಅಕಾಡೆಮಿಯ ಆಶ್ರಯದಲ್ಲಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ, ಮಹಿಳಾ ಘಟಕ, ತರುಣ ಘಟಕ ನಗರ ಸಮಿತಿ ಮತ್ತು ಮಹಿಳಾ ಸಮಿತಿಯ ಸಹಕಾರದಲ್ಲಿ ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆದ ಅರೆಭಾಷೆ ದಿನಾಚರಣೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಇಂಜಿನಿಯರ್ ಡಿ.ಎಂ.ಸುಮಿತ್ರಾ ಉದ್ಘಾಟಿಸಿದರು. ಅರೆಭಾಷೆ ಬೆಳವಣಿಗೆಗೆ ಸಹಕರಿಸಿದ ಉದ್ಯಮಿ ಎಸ್.ಅಬ್ದುಲ್ಲ ಕಟ್ಟೆಕ್ಕಾರ್ಸ್, ಗಾಯಕ, ಕೆ.ಆರ್.ಗೋಪಾಲಕೃಷ್ಣ ಪತ್ರಕರ್ತ ಹರೀಶ್ ಬಂಟ್ವಾಳ್, ಜಯರಾಮ ಅಜಿಲ, ಸಾವಿತ್ರಿ ಕಣೆಮರಡ್ಕ, ಉದಯಭಾಸ್ಕರ್ ಅವರನ್ನು ಗೌರವಿಸಲಾಯಿತು.

ಗೌಡರ ಯುವ ಸೇವಾ ಸಂಘದ ಪೂರ್ವಾಧ್ಯಕ್ಷ ಕೆ.ಸಿ.ಸದಾನಂದ ಕುರುಂಜಿ, ಮೋಹನ್ ರಾಮ್ ಸುಳ್ಳಿ, ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ ಅಧ್ಯಕ್ಷ ಪಿ.ಎಸ್.ಗಂಗಾಧರ, ಅರೆಭಾಷೆ ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೇರಾಲು, ಚಂದ್ರಾವತಿ ಬಡ್ಡಡ್ಕ, ಪಿ.ಎಸ್.ಕಾರ್ಯಪ್ಪ, ಲತಾ ಪ್ರಸಾದ್ ಕುದ್ರಾಜೆ, ಕಾರ್ಯಕ್ರಮದ ಸಂಘಟಕ ದಿನೇಶ್ ಮಡಪ್ಪಾಡಿ, ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು, ಗೌಡ ನಗರ ಸಮಿತಿ ಅಧ್ಯಕ್ಷ ರಾಕೇಶ್ ಕುಂಠಿಕಾನ, ನಗರ ಮಹಿಳಾ ಸಮಿತಿ ಅಧ್ಯಕ್ಷೆ ಹರ್ಷ ಕರುಣಾಕರ, ತರುಣ ಘಟಕ ಅಧ್ಯಕ್ಷ ಪ್ರೀತಮ್ ಡಿ.ಕೆ.ಉಪಸ್ಥಿತರಿದ್ದರು.

ಅಕಾಡೆಮಿ ಸದಸ್ಯ ಸಂಚಾಲಕಿ ಲತಾ ಪ್ರಸಾದ್ ಕುದ್ಪಾಜೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶಶಿಧರ ಎಂ.ಜೆ.ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net